ವೇತನ ಬಿಡುಗಡೆಗೆ ಆಗ್ರಹ

IMG-20201028-WA0050
Published on

ಮಂಡ್ಯ: ಲಾಕ್‌ಡೌನ್ ಅವಧಿಯ ವೇತನ ಬಿಡುಗಡೆ ಹಾಗೂ ಸೇವಾ ಭದ್ರತೆಗೆ ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಲಾಕ್‌ಡೌನ್ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರ ಕುಟುಂಬಗಳು ಸಂಕಷ್ಟದಲ್ಲಿರುವುದರ ಬಗ್ಗೆ ಅರಿತು ವೇತನ ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಗೆ ಸೂಚಿಸಿದ್ದಾರೆ. ಆದರೆ ಸೂಚನೆ ನೀಡಿ ತಿಂಗಳು ಕಳೆಯುತ್ತಾ ಬಂದರೂ ಬಿಡುಗಡೆ ಮಾಡಿಲ್ಲ. ಅಲ್ಲದೆ, ಈಗಾಗಲೇ 8 ತಿಂಗಳಿನಿಂದ ವೇತನ ಇಲ್ಲದೆ ಅತಿಥಿ ಉಪನ್ಯಾಸಕರ ಕುಟುಂಬಗಳು ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ಕೂಡಲೇ ವೇತನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಮಿತಿಯ ಗೌರವಾಧ್ಯಕ್ಷ ಜಿ.ಎಸ್.ನಾಗರಾಜು, ಅರವಿಂದ್, ಮಹೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net