ಸೇವೆ ಖಾಯಂಗೆ ಅತಿಥಿ ಉಪನ್ಯಾಸಕರ ಒತ್ತಾಯ: ಸರ್‌ಎಂವಿ ಪ್ರತಿಮೆ ಎದುರು ಅನಿರ್ದಿಷ್ಟಾವಧಿ ಮುಷ್ಕರ ಪ್ರಾರಂಭ

Guest Lecturer's Protest mandya
Published on

ಮಂಡ್ಯ: ಸೇವೆ ಖಾಯಂ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಮುಷ್ಕರ ಆರಂಭಿಸಿದರು. ಇವರಿಗೆ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಸದಸ್ಯರು ಬೆಂಬಲಿಸಿದರು.

ಜಿಲ್ಲೆಯ ಎಲ್ಲ ತಾಲ್ಲೂಕು ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಮುಷ್ಕರದಲ್ಲಿ ಪಾಲ್ಗೊಂಡಿದ್ದರು. ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸುಮಾರು 11 ಸಾವಿರ ಅತಿಥಿ ಉಪನ್ಯಾಸಕರುಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಲವಾರು ವರ್ಷಗಳಿಂದ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇದುವರೆಗೂ ಸರ್ಕಾರ ನಮಗೆ ಸೇವೆ ಖಾಯಂ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ನೀಡದೆ ವಂಚಿಸಿದೆ. ಇದರಿಂದ ನಮ್ಮೆಲ್ಲರ ಜೀವನವು ಸಾಮಾಜಿಕ, ಆರ್ಥಿಕವಾಗಿ ಶೋಚನೀಯ ಸ್ಥಿತಿಯಲ್ಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷ ಜಿ.ವಿ.ರಮೇಶ್, ಜಿಲ್ಲಾಧ್ಯಕ್ಷ ಕೆ.ಪರಮೇಶ, ಉಪಾಧ್ಯಕ್ಷ ಡಾ.ಎಂ.ಎಸ್.ಚೆಲುವರಾಜು, ಪ್ರಧಾನ ಕಾರ್ಯದರ್ಶಿ ಎಸ್.ಮಂಜು, ಕಾರ್ಯದರ್ಶಿ ಗಣೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net