ತರಕಾರಿ ಮಾರಿದ ಅತಿಥಿ ಉಪನ್ಯಾಸಕರು

BLY- 16-3
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಶನಿವಾರ ಸರಳಾದೇವಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಮುಂದೆ ತರಕಾರಿ ಮಾರುವ ಮೂಲಕ ವಿನೂತನವಾಗಿ ಪ್ರತಿಭಟನೆ ಮಾಡಿದರು.
Published on

ಬಳ್ಳಾರಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಶನಿವಾರ ಸರಳಾದೇವಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಮುಂದೆ ತರಕಾರಿ ಮಾರುವ ಮೂಲಕ ವಿನೂತನವಾಗಿ ಪ್ರತಿಭಟನೆ ಮಾಡಿದರು.

ಈ ವೇಳೆ ಅತಿಥಿ ಉಪನ್ಯಾಸಕ ಸಂಘದ ಜಿಲ್ಲಾಧ್ಯಕ್ಷ ಡಾ.ಟಿ.ದುರಗಪ್ಪ, ಮಾತನಾಡಿ, ಸರ್ಕಾರಿ ಪದವಿ ಕಾಲೇಜುಗಳ ಅಥಿತಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಯನ್ನು ಈಡೇರಿಸಬೇಕು. ಈಗಾಗಲೇ ಅನೇಕ ಬಾರಿ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸೇವೆಯನ್ನು ಕಾಯಂಗೊಳಿಸಬೇಕು. ಅತಿಥಿ ಉಪನ್ಯಾಸಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು. ಇಂದಿನ ದಿನಗಳಲ್ಲಿ ಜೀವನ ನಡೆಸುವುದು ಕಷ್ಟಕರವಾಗಿದೆ. ಆರ್ಥಿಕವಾಗಿ ಕುಟುಂಬ ನಿರ್ವಹಣೆ ಮಾಡಲಾಗದೆ ಅನೇಕರು ವೃತ್ತಿಯನ್ನು ಬಿಟ್ಟು ಬೇರೆ ಕೆಲಸ ಮಾಡುತ್ತಿದ್ದಾರೆ ಎಂದರು.

ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಶೀಲಿಸಿ ಅವರಿಗೆ ನ್ಯಾಯ ಒದಗಿಸಬೇಕು. ಅತಿಥಿ ಉಪನ್ಯಾಸಕರಿಗೆ ನೀಡುವ ಸಂಬಳವನ್ನು ಸರ್ಕಾರಿ ನೌಕರರಿಗೆ ನೀಡುವ ಹಾಗೆ ಪ್ರತಿ ತಿಂಗಳು ನೀಡಬೇಕು. ಅತಿಥಿ ಉಪನ್ಯಾಕರಿಗೆ ಯುಜಿಸಿ ನಿಯಮಾವಳಿ ಪ್ರಕಾರ ವೇತನವನ್ನು ನೀಡುವುದರ ಬಗ್ಗೆ ಸರ್ಕಾರ ತಕ್ಷಣವೇ ಪರಿಹರಿಸಬೇಕು ಎಂದು ಒತ್ತಾಯಿಸಿದರು.

ಅತಿಥಿ ಉಪನ್ಯಾಸಕರಾದ ಡಾ.ಕೆ.ಬಸಪ್ಪ, ಸಿದ್ದೇಶ್, ರುದ್ರಮುನಿ, ದಸ್ತಗಿರಿ, ಜಗದೀಶ್, ಹನುಮಂತರಾಯ, ಶುಭಾಜ್ಯೋತಿ, ರುದ್ರಮ್ಮ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net