ಮಾಧ್ಯಮ ಪ್ರತಿನಿಧಿಗಳ ಮೇಲಿನ ಹಲ್ಲೆಗೆ ಖಂಡನೆ

kuwj2
Published on

ಯಾದಗಿರಿ: ಇತ್ತೀಚಿನ ಬೆಳವಣಿಗೆಯಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ನಿರಂತರ ಹಲ್ಲೆ ನಡೆಯುತ್ತಿರುವುದನ್ನು ಖಂಡಿಸಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿಪತ್ರ ಸಲ್ಲಿಸಲಾಯಿತು.

ಬೆಂಗಳೂರಿನ ಡಿ.ಜಿ. ಹಳ್ಳಿಯಲ್ಲಿ ನಡೆದ ಗಲಭೆಯ ವರದಿಗೆ ಹೋಗಿದ್ದ ಮಾಧ್ಯಮದವರ ಮೇಲೆ ಹಲ್ಲೆ ಮಾಡಿ ವಾಹನ ಜಖಂಗೊಳಿಸಿದ್ದು ಖಂಡನೀಯ. ಹಲ್ಲೆಕೋರರನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಸಂಘದ ಪದಾಧಿಕಾರಿಗಳು ಆಗ್ರಹಿಸಿದರು.

ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ವಿಜಯವಾಣಿ ಪ್ರತಿನಿಧಿ ಶರಣಬಸವ ನೀರಮಾನ್ವಿ ಮೇಲೆ ಪ್ರಭುರಾಜ ಕೊಡ್ಲಿ ಹಲ್ಲೆಗೆ ಯತ್ನಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಜಿಲ್ಲಾಧ್ಯಕ್ಷ ಬಿ.ಎಂ. ಜಗದೀಶ, ಪತ್ರಕರ್ತರಾದ ಗಿರೀಶ, ಅನೀಲ ಬಸೂದೆ, ವೈಜನಾಥ ಹಿರೇಮಠ, ಸಾಗರ ದೇಸಾಯಿ ಇದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net