ಶಾರ್ಟ್ ಸರ್ಕ್ಯೂಟ್‌ನಿಂದ ಗುಜುರಿ ವಸ್ತುಗಳು ಭಸ್ಮ

GUJIRI FIRE
Published on

ಉಳ್ಳಾಲ: ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ಶನಿವಾರ ಮಧ್ಯಾಹ್ನ ಶಾರ್ಟ್ ಸರ್ಕ್ಯೂಟ್‌ನಿಂದ ಗುಜುರಿ ಅಂಗಡಿಯಲ್ಲಿ ಬೆಂಕಿ ಹಿಡಿದು ಗುಜರಿ ವಸ್ತುಗಳು ಭಸ್ಮವಾಗಿವೆ. ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಲ್ಲಾಪು ಸಮೀಪದ ಆಡಂಕುದ್ರು ನಿವಾಸಿ ಐವನ್ ಡಿಸೋಜ ಎಂಬುವರ ಜಾಗದಲ್ಲಿ ಬಾಡಿಗೆ ಆಧಾರದಲ್ಲಿ ನಡೆಸಲ್ಪಡುತ್ತಿರುವ ಅನ್ವರ್ ಅವರ ಗುಜುರಿ ಅಂಗಡಿಯಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿದೆ. ಅಂಗಡಿಯೊಳಗೆ ಸಣ್ಣ ಮಟ್ಟಿನ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಏಕಾಏಕಿ ಬೆಂಕಿ ವ್ಯಾಪಿಸಿದೆ. ಘಟನೆ ನಡೆದಾಗ ಅಪಾಯ ಅರಿತ ಕಾರ್ಮಿಕರು ಅಂಗಡಿಯಿಂದ ಹೊರಬಂದು ಸಾಮಾನುಗಳನ್ನು ಹೊರಗಡೆ ಸಾಗಿಸಿದ್ದಾರೆ. ಕಾರ್ಮಿಕರು ಸಾಧ್ಯವಾದಷ್ಟು ಸಾಮಗ್ರಿಗಳನ್ನು ಹೊರಹಾಕುವ ಪ್ರಯತ್ನ ಮಾಡಿದ್ದರೂ, ಬೆಂಕಿಯ ಕೆನ್ನಾಲಗೆಗೆ ಅಂಗಡಿ ಹೊತ್ತಿ ಉರಿದು ಒಳಗಡೆ ಉಳಿದ ಅಪಾರ ಪ್ರಮಾಣದ ಗುಜುರಿ ವಸ್ತುಗಳು ಭಸ್ಮವಾಗಿವೆ. ಅಲ್ಲದೆ ಜನರೇಟರ್ ಮತ್ತು ಅಂಗಡಿಗೆ ತಾಗಿಕೊಂಡಿದ್ದ ತೆಂಗಿನ ಮರವೂ ಸುಟ್ಟು ಹೋಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕಂಕನಾಡಿ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net