ಗುಜ್ಜಾಡಿ ಸರ್ಕಾರಿ ಶಾಲೆ ಹಳೆ ವಿದ್ಯಾರ್ಥಿ ಸಂಘ ರಜತ ಸಂಭ್ರಮ

17gan6
Published on

ಕುಂದಾಪುರ: ಬೈಂದೂರು ವಲಯದ ಗುಜ್ಜಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳೇ ವಿದ್ಯಾರ್ಥಿ ಸಂದ ರಜತ ಸಂಭ್ರಮ ಕಾರ್ಯಕ್ರಮ ಪ್ರಯುಕ್ತ ಉಡುಪಿ ನೇತ್ರ ಜ್ಯೋತಿ ಚಾರಿಟೆಬಲ್ ಟ್ರಸ್ಟ್, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ಮತ್ತು ಹಳೇ ವಿದ್ಯಾರ್ಥಿ ಸಂ ಆಶ್ರಯದಲ್ಲಿ ನೇತ್ರ ಮತ್ತು ಆರೋಗ್ಯ ಉಚಿತ ತಪಾಸಣೆ ಶಿಬಿರ ಗುಜ್ಜಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಭಾಂಗಣದಲ್ಲಿ ಶನಿವಾರ ನಡೆಯಿತು.

ಹೆವ್ಮಾಡಿ ಪಂಚಗಂಗಾ ರೈತರ ಸೇವಾ ಸಹಕಾರಿ ಸಂದ ನಿರ್ದೇಶಕಿ ಸುನೀತಾ ಆರ್.ಪೂಜಾರಿ ಶಿಬಿರ ಉದ್ಘಾಟಿಸಿದರು. ಹಳೇ ವಿದ್ಯಾರ್ಥಿ ಸಂ ಅಧ್ಯಕ್ಷ ರಾಮನಾಥ ಚಿತ್ತಾಲ್ ಅಧ್ಯಕ್ಷತೆ ವಹಿಸಿದ್ದರು. ಶಾಲೆ ಎಸ್‌ಡಿಎಂಸಿ ಸದಸ್ಯ ನಾರಾಯಣ ಕೆ.ಗುಜ್ಜಾಡಿ ಧ್ವಜಾರೋಹಣ ನೆರವೇರಿಸಿದರು. ಶಾಲೆ ಶತವಾನೋತ್ಸವ ಸಮಿತಿ ಅಧ್ಯಕ್ಷ ಉಮೇಶ ಎಲ್.ಮೇಸ್ತ, ಗುಜ್ಜಾಡಿ ಗ್ರಾ.ಪಂ. ಸದಸ್ಯ ಹರೀಶ್ ಮೇಸ್ತ, ಗೋಪಾಲ ನಾಯ್ಕ, ಮುಖ್ಯ ಶಿಕ್ಷಕ ಗಂಗಾಧರ ಬಂಟ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ವೈದ್ಯರು, ಸಂ ಕಾರ್ಯದರ್ಶಿ ರಾವೇಂದ್ರ ಡಿ., ಗೌರವಾಧ್ಯಕ್ಷ ಎ.ಆರ್.ವಲೀಯುಲ್ಲ, ಕೋಶಾಧಿಕಾರಿ ಪ್ರಕಾಶ್ ಎನ್.ಮೇಸ್ತ, ಸಂದ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net