

ವಿಜಯವಾಣಿ ಸುದ್ದಿಜಾಲ ಗಂಗೊಳ್ಳಿ
ಎಲ್ಲ ಶಾಲೆಗಳಿಗೆ ಮೂಲಸೌಲಭ್ಯ ಒದಗಿಸುವುದು ಸರ್ಕಾರದಿಂದ ಅಸಾಧ್ಯವಾಗಿದ್ದು, ದಾನಿಗಳು ಹಾಗೂ ವಿದ್ಯಾಭಿಮಾನಿಗಳು ತಲಾ ಒಂದು ಶಾಲೆ ದತ್ತು ಪಡೆದು ಅಭಿವೃದ್ಧಿಪಡಿಸಬೇಕು. ಬೈಂದೂರು ವಲಯದ ಅತ್ಯುತ್ತಮ ಶಾಲೆಗಳ ಪೈಕಿ ಒಂದಾಗಿರುವ ಗುಜ್ಜಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅತಿ ಹೆಚ್ಚು ವಿದ್ಯಾರ್ಥಿಗಳ ಹೊಂದಿರುವ ಹಿರಿಮೆಗೆ ಪಾತ್ರವಾಗಿದೆ ಎಂದು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು. ಗುಜ್ಜಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 13.9 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ವಿವೇಕ ಕೊಠಡಿಗಳನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.
ಎಸ್ಡಿಎಂಸಿ ಅಧ್ಯಕ್ಷ ನಾರಾಯಣ ಕೆ. ಅಧ್ಯಕ್ಷತೆ ವಹಿಸಿದ್ದರು. ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷ ನಾರಾಯಣ ಟಿ.ಪೂಜಾರಿ, ಅಧ್ಯಕ್ಷ ಉಮೇಶ ಎಲ್.ಮೇಸ್ತ, ಗುಜ್ಜಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ತಮ್ಮಯ್ಯ ದೇವಾಡಿಗ, ಸದಸ್ಯ ಹರೀಶ ಮೇಸ್ತ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮನಾಥ ಚಿತ್ತಾಲ್, ದಾನಿಗಳಾದ ದಯಾಕರ ಮೇಸ್ತ, ಪದ್ಮಾವತಿ ಡಿ.ಮೇಸ್ತ, ಐಶ್ವರ್ಯಾ ಡಿ.ಮೇಸ್ತ, ತುಂಗ ಪೂಜಾರಿ, ಶ್ರೀಧರ, ಶಿಕ್ಷಣ ಸಂಯೋಜಕ ಯೋಗೀಶ್, ಮುಖ್ಯ ಶಿಕ್ಷಕ ಗಂಗಾಧರ ಬಂಟ, ಎಸ್ಡಿಎಂಸಿ ಸದಸ್ಯರು, ಶಿಕ್ಷಕರು ಮೊದಲಾದವರು ಉಪಸ್ಥಿತರಿದ್ದರು. ವಿಶ್ವನಾಥ ಕಾರ್ಯಕ್ರಮ ನಿರೂಪಿಸಿದರು.