

ಕಲಬುರಗಿ : ಇಲ್ಲಿನ ಗುಲ್ಬರ್ಗ ವಿಶ್ವವಿದ್ಯಾಲಯದ 45ನೇ ಸಂಸ್ಥಾಪನಾ ದಿನಾಚರಣೆ ಇಂದು ಡಾ.ಬಿ. ಆರ್ ಅಂಬೇಡ್ಕರ್ ಭವನದಲ್ಲಿ ಜರುಗಿತು.
ಗುಲ್ಬರ್ಗ ವಿಶ್ವವಿದ್ಯಾಲಯ ಕುಲಪತಿಗಳಾದ ಪ್ರೊ.ದಯಾನಂದ ಅಗಸರ್ ಅವರು ಉದ್ಘಾಟಿಸಿದರು. ಕುಲಸಚಿವ ಪ್ರೊ.
ರಾಜನಾಳಕರ್ ಲಕ್ಷ್ಮಣ, ಮೌಲ್ಯಮಾಪನ ಕುಲಸಚಿವೆ ಪ್ರೊ. ಮೇಧಾವಿನಿ ಎಸ್ ಕಟ್ಟಿ, ಸಿಂಡಿಕೇಟ್ ಸದಸ್ಯ ಪ್ರೊ. ಜಿ.ರಾಮುಲು,ವಿದ್ಯಾ ವಿಷಯಕ ಪರಿಷತ್ ಸದಸ್ಯ ಪ್ರೊ. ಕೆ.ಸಿದ್ದಪ್ಪ ವಿತ್ತಾಧಿಕಾರಿ, ಕುಮಾರಿ ಗಾಯತ್ರಿ ಸೇರಿದಂತೆ ಡೀನರು ಉಪನ್ಯಾಸಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.