ಹೊಸ ತಾಲೂಕುಗಳಿಗೆ ಸೌಲಭ್ಯ ಒದಗಿಸಿ

sr patil
Published on

ಗುಳೇದಗುಡ್ಡ: ರಾಜ್ಯದಲ್ಲಿ ಹೊಸ ತಾಲೂಕುಗಳು ಘೋಷಣೆಯಾಗಿದ್ದು ಅವುಗಳಿಗೆ ಮೂಲಸೌಕರ್ಯಗಳನ್ನು ಒದಗಿಸುವಲ್ಲಿ ಯಡಿಯೂರಪ್ಪ ಸರ್ಕಾರ ವಿಲವಾಗಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ಆರೋಪಿಸಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ತಾಲೂಕುಗಳನ್ನು ಪತ್ರಿಕೆಗಳಲ್ಲಿ ಘೋಷಣೆ ಮಾಡಿದರೆ ಸಾಲದು. ಅವುಗಳನ್ನು ಕಾರ್ಯರೂಪಕ್ಕೆ ತರಬೇಕು. ಹೊಸ ತಾಲೂಕುಗಳಿಗೆ ತಹಸೀಲ್ದಾರ್ ಕಚೇರಿ ಕಟ್ಟಡ ನಿರ್ಮಿಸಿ ಅಗತ್ಯ ಅಧಿಕಾರಿ, ಸಿಬ್ಬಂದಿ ನೇಮಿಸಬೇಕು. ಇತರ ಸರ್ಕಾರಿ ಕಚೇರಿಗಳು ಹಾಗೂ ನ್ಯಾಯಾಲಯಕ್ಕೆ ಸ್ವಂತ ಕಟ್ಟಡದ ಅವಶ್ಯಕತೆ ಇದೆ. ಗುಳೇದಗುಡ್ಡ ಕೇವಲ ಹೆಸರಿಗೆ ಮಾತ್ರ ತಾಲೂಕು ಆಗಿದೆ. ಇಲ್ಲಿನ ಜನಕ್ಕೆ ತಾಲೂಕುಮಟ್ಟದಲ್ಲಿ ಸಿಗುವ ಎಲ್ಲ ಸೌಲಭ್ಯಗಳು ಸಿಗುತ್ತಿಲ್ಲ. ಆದಷ್ಟು ತ್ವರಿತ ಗತಿಯಲ್ಲಿ ಹೊಸ ತಾಲೂಕುಗಳಿಗೆ ಅಗತ್ಯ ಸೌಕರ್ಯಗಳನ್ನು ಸರ್ಕಾರ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಸ್.ಆರ್. ಪಾಟೀಲ ಸರ್ಕಾರಕ್ಕೆ ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net