ಗುಂಡಬಾಳ ನದಿಗೆ ನೆರೆ

23hnr rain havoc
Published on

ಹೊನ್ನಾವರ: ತಾಲೂಕಿನಲ್ಲಿ ಕಳೆದ ಎರಡು ದಿನಗಳಿಂದ ಸುರಿದ ಧಾರಾಕಾರ ಮಳೆ ಸುರಿಯುತ್ತಿದ್ದು ಭಾನುವಾರ ಗುಂಡಬಾಳ ನದಿಯಲ್ಲಿ ನೆರೆ ಉಂ ಟಾಗಿದೆ. ನದಿ ತೀರದ ತೋಟ, ಗದ್ದೆ, ಮನೆಗಳಿಗೆ ನೀರು ನುಗ್ಗಿದೆ.
ಗುಂಡಬಾಳ, ಕೆಂಚಾಗಾರ, ಗುಂಡಿಬೈಲ್, ಚಿಕ್ಕನಕೋಡ, ಮುಟ್ಟಾ, ಹಾಡಗೇರಿ, ಹುಡಗೋಡ, ಹಡಿನಬಾಳ, ಕಡಗೇರಿ, ನಾಥಗೇರಿಯ ವ್ಯಾಪ್ತಿಯ ನದಿ ಅಂಚಿನ ಮನೆ ಮತ್ತು ತೋಟಗಳಿಗೆ ನೆರೆಯ ನೀರು ನುಗ್ಗುವ ಆತಂಕ ಎದುರಾಗಿದೆ. ಜನರು ದೋಣಿಯ ಮೂಲಕ ಕಾಳಜಿ ಕೇಂದ್ರಕ್ಕೆ ತೆರಳಲು ತಾಲೂಕು ಆಡಳಿತ ಸೂಚಿಸಿದ್ದು, ಗ್ರಾಮ ಪಂಚಾಯಿತಿ ಮುಂಜಾಗ್ರತಾ ಕ್ರಮವಾಗಿ ಕಾಳಜಿ ಕೇಂದ್ರಗಳಲ್ಲಿ ಎಲ್ಲ ವ್ಯವಸ್ಥೆ ಮಾಡಿಕೊಂಡಿದೆ. ನೆರೆಪೀಡಿತ ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ಭೇಟಿ ನೀಡಿ ಅಗತ್ಯ ಕ್ರಮ ತೆಗೆದುಕೊಂಡಿದ್ದಾರೆ.
ನಿರಂತರ ಸುರಿಯುತ್ತಿರುವ ಮಳೆಯಿಂದ ತಾಲೂಕಿನ ಗುಂಡಬಾಳ, ಭಾಸ್ಕೇರಿ ಮತ್ತು ಬಡಗಣಿ ನದಿಗಳು ತುಂಬಿ ಹರಿಯುತ್ತಿವೆ. ತಗ್ಗು ಪ್ರದೇಶಗಳು ಜಲಾವ್ರತವಾಗಿವೆ. ಮಳೆ ಇದೇ ರೀತಿ ಮುಂದುವರಿದರೆ ಹೆಚ್ಚಿನ ಹಾನಿ ಸಂಭವಿಸುವ ಆತಂಕ ಜನರಲ್ಲಿ ಮೂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net