ಸೌಲಭ್ಯಕ್ಕಾಗಿ ಕಾರ್ಮಿಕ ಸಂಘಟನೆ ಪ್ರತಿಭಟನೆ

16-GPT-4
Published on

ಗುಂಡ್ಲುಪೇಟೆ: ವಿಮೆ ಸೇರಿದಂತೆ ಸರ್ಕಾರದಿಂದ ಒದಗಿಸಿರುವ ಎಲ್ಲ ಸವಲತ್ತುಗಳನ್ನು ತಮಗೆ ನೀಡುವಂತೆ ಒತ್ತಾಯಿಸಿ ಪಟ್ಟಣದಲ್ಲಿ ಕಾರ್ಮಿಕ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ರಾಜ್ಯ ಕಟ್ಟಡ ಮತ್ತು ಇತರ ಕಾರ್ಮಿಕರ ಫೆಡರೇಶನ್‌ನ ತಾಲೂಕು ಸಂಘದ ಅಧ್ಯಕ್ಷ ಚಂದ್ರಶೇಖರ್ ನೇತೃತ್ವದಲ್ಲಿ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿ ತಾಲೂಕು ಕಚೇರಿಗೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿದರು. ದಿನೇ ದಿನೆ ಕಾರ್ಮಿಕರ ಬದುಕು ಅಸಹನೀಯವಾಗಿದ್ದು, ಜೀವವನ್ನು ಒತ್ತೆಯಿಟ್ಟು ಕೆಲಸ ಮಾಡುವಂತಾಗಿದೆ. ಆದ್ದರಿಂದ ವಿಮೆ ಸೇರಿದಂತೆ ಸರ್ಕಾರದಿಂದ ಬರಬೇಕಾದ ಎಲ್ಲ ಸವಲತ್ತುಗಳನ್ನು ದೊರಕುವಂತೆ ಒತ್ತಾಯಿಸಿ, ಮನವಿ ಪತ್ರವನ್ನು ಕಾರ್ಮಿಕ ಇಲಾಖೆಯ ನಿರೀಕ್ಷಕ ನಾರಾಯಣಮೂರ್ತಿ ಅವರಿಗೆ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net