

ಗುಂಡ್ಲುಪೇಟೆ: ಚಾಮರಾಜನಗರ ಜೋಡಿ ರಸ್ತೆಯಲ್ಲಿರುವ ಶಕ್ತಿ ಆಂಜನೇಯಸ್ವಾಮಿ ದೇವಸ್ಥಾನ ಸ್ಥಳಾಂತರ ಕಾರ್ಯಕ್ಕೆ ಗುರುವಾರ ಚಾಲನೆ ನೀಡಲಾಗಿದೆ. ರಸ್ತೆ ವಿಸ್ತರಣೆಗೆ ದೇವಸ್ಥಾನವು ಅಡ್ಡಿಯಾಗಿದ್ದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕೆಡವಲು ಆದೇಶ ನೀಡಿದ್ದರು. ಇತ್ತೀಚೆಗೆ ಶಾಸಕ ಸಿ.ಎಸ್.ನಿರಂಜನಕುಮಾರ್ ಪುರಸಭೆಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲಿಸಿದ್ದರು. ಗುರುವಾರ ಬೆಳಗ್ಗೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಮೂಲವಿಗ್ರಹವನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದ್ದು, ದೇವಸ್ಥಾನವನ್ನು ಕೆಡವಲು ಸಿದ್ಧತೆ ನಡೆಸಲಾಗಿದೆ ಎಂದು ಪುರಸಭೆಯ ಅಧಿಕಾರಿಗಳು ತಿಳಿಸಿದರು.