ಗುಂಡ್ಲುಪೇಟೆಯಲ್ಲಿ ಇಂದು 144 ಜಾರಿ

IMG-20240823-WA0184
Published on

ಗುಂಡ್ಲುಪೇಟೆ: ಪಟ್ಟಣದ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಸೆ.4ರಂದು ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿ ಗೊಳಿಸಿದೆ.


ಬಿಜೆಪಿಯ ನಾಲ್ಕು ಸದಸ್ಯರು ಕಾಂಗ್ರೆಸ್ ಜತೆ ಹೊಗಿರುವ ಹಿನ್ನೆಲೆಯಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿ ತನ್ನ ಸದಸ್ಯರು ವಾಪಸ್ ಬರದಿದ್ದರೆ ಚುನಾವಣೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಇದರಿಂದ ಶಾಂತಿ ಸುವ್ಯವಸ್ಥೆ ಹಾಗೂ ಸುಗಮವಾಗಿ ಚುನಾವಣೆ ನಡೆಸುವ ಉದ್ದೇಶದಿಂದ ತಹಸೀಲ್ದಾರ್ ಟಿ.ರಮೇಶ್ ಬಾಬು ಬುಧವಾರ ಬೆಳಗ್ಗೆ 9 ಸಂಜೆ 5 ಗಂಟೆಯ ವರೆಗೆ ಪುರಸಭೆ ಕಚೇರಿಯ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net