ಆಷಾಢದ ಅಂಗವಾಗಿ ವಿಶೇಷ ಪೂಜೆ

23-GPT-3
Published on

ಗುಂಡ್ಲುಪೇಟೆ: ಪಟ್ಟಣದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಮೊದಲನೇ ಆಷಾಢದ ಅಂಗವಾಗಿ ಪ್ರಧಾನ ಅರ್ಚಕರಾದ ಸುಬ್ರಹ್ಮಣ್ಯ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.

ದೇವಾಲಯವನ್ನು ತಳಿರು ತೋರಣಗಳಿಂದ ಸಿಂಗರಿಸಿ ತಾಯಿ ಚಾಮುಂಡೇಶ್ವರಿಯ ವಿಗ್ರಹಕ್ಕೆ ವಿವಿಧ ಬಗೆಯ ಹೂವುಗಳಿಂದ ಅಲಂಕರಿಸಲಾಗಿತ್ತು. ಈ ಸಂದರ್ಭದಲ್ಲಿ ಭಾವಸಾರ್ ಕ್ಷತ್ರಿಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಹಿಳಾ ಘಟಕದ ಸದಸ್ಯರು ಹಾಗೂ ಪಟ್ಟಣದ ವಿವಿಧ ಬಡಾವಣೆಯ ಭಕ್ತರು ಭಾಗವಹಿಸಿ ದೇವಿಯ ದರ್ಶನ ಪಡೆದು ಪುನೀತರಾದರು. ನೂರಾರು ಸಂಖ್ಯೆಯಲ್ಲಿ ಆಗಮಿಸಿದ ಸುಮಂಗಲಿಯರು ದೇವಿಗೆ ನಿಂಬೆ ಹಣ್ಣಿನ ದೀಪ ಹಾಗೂ ಹರಕೆಗಳನ್ನು ಅರ್ಪಿಸಿದರು. ಈ ವೇಳೆ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net