ಗುಂಡ್ಲುಪೇಟೆ ರೈತ ಮುಖಂಡರ ಆಕ್ರೋಶ

07-GPT-1
Published on

ಗುಂಡ್ಲುಪೇಟೆ: ತಾಲೂಕಿನಲ್ಲಿ ಅಕ್ರಮ ಚಟುವಟಿಕೆಗಳು ಸಲೀಸಾಗಿ ನಡೆಯುತ್ತಿದ್ದು, ಇವುಗಳನ್ನು ತಡೆಗಟ್ಟುವಲ್ಲಿ ಸಂಬಂಧಪಟ್ಟ ಇಲಾಖೆಗಳು ವಿಫಲವಾಗಿದ್ದು ಜನಪ್ರತಿನಿಧಿಗಳೂ ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಟಿ ನಡೆಸಿದ ರೈತ ಸಂಘದ ಜಿಲ್ಲಾ ಸಂಚಾಲಕ ಕಡಬೂರು ಮಂಜುನಾಥ್ ಮಾತನಾಡಿ, ಕಳೆದ ನಾಲ್ಕು ದಿನಗಳ ಹಿಂದೆ ತಾಲೂಕಿನ ಶಿವಪುರ ಸಮೀಪದ ಜಮೀನೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 510 ಚೀಲ ರಸಗೊಬ್ಬರ ಹೊರರಾಜ್ಯಗಳಿಗೆ ಸಾಗಾಣೆ ಮಾಡುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕೃಷಿ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದರು. ರಸಗೊಬ್ಬರಕ್ಕೆ ಕೇಂದ್ರ ಸರ್ಕಾರ ಸಬ್ಸಿಡಿ ನೀಡುತ್ತಿದ್ದು ಸಕಾಲದಲ್ಲಿ ರೈತರಿಗೆ ಸಿಗದೆ ಪರದಾಡುತ್ತಿದ್ದರೆ ಕೆಲವರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಜಿಲ್ಲಾ ಗೌರವಾಧ್ಯಕ್ಷ ಮಾಡ್ರಹಳ್ಳಿ ಮಹದೇವಪ್ಪ, ಹಾಲಹಳ್ಳಿ ಮಹೇಶ್, ಬೆಟ್ಟದಮಾದಹಳ್ಳಿ ಷಣ್ಮುಖಸ್ವಾಮಿ, ವೃಷಭೇಂದ್ರ, ರಘು ಸೇರಿದಂತೆ ಹಲವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net