

ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ನಾನಾ ಶಾಲೆಗಳಲ್ಲಿ ಗುರುವಾರ ಡೆಂಘೆ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಆಸ್ಪತ್ರೆಯ ಆರೋಗ್ಯ ನಿರೀಕ್ಷಣಾಧಿಕಾರಿ ಸುದರ್ಶನ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳು, ಜೆಎಸ್‌ಎಸ್ ಪ್ರೌಢಶಾಲೆ ತೆರಕಣಾಂಬಿ ಇಲ್ಲಿಯ ಶಾಲಾ ಮಕ್ಕಳುಗಳಿಗೆ ಡೆಂಘೆ ಜ್ವರದ ಬಗ್ಗೆ ಆರೋಗ್ಯ ಶಿಕ್ಷಣವನ್ನು ಹಾಗೂ ಲಾರ್ವ ಪ್ರಾತ್ಯಕ್ಷತೆಯನ್ನು ತೋರಿಸುವ ಮೂಲಕ ಮಕ್ಕಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಸಿಕೊಟ್ಟರು.
ಡೆಂಘೆ ಜ್ವರವು ವೈರಸ್‌ನಿಂದ ಹರಡುವ ರೋಗವಾಗಿದ್ದು ಇದು ಈಡೀಸ್ ಈಜಿಪ್ಟ್ ಸೊಳ್ಳೆ ಕಚ್ಚುವುದರಿಂದ ಒಬ್ಬರಿಂದ ಒಬ್ಬರಿಗೆ ಹರಡುವ ಕಾಯಿಲೆ ಇದಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಿ ಹಾಗೂ ಸಿಮೆಂಟ್ ತೊಟ್ಟಿ ಟೈಯರ್ ಬ್ಯಾರೆಲ್ ಇತ್ಯಾದಿಗಳಲ್ಲಿ ನೀರು ಶೇಖರಣೆಯಾಗದ ರೀತಿ ನೋಡಿಕೊಳ್ಳಬೇಕು. ತಮ್ಮ ಮನೆಗಳ ಸುತ್ತಮುತ್ತ ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ತಿಳಿಸಿದರು. ಈ ವೇಳೆ ಆಶಾ ಕಾರ್ಯಕರ್ತೆಯರಾದ ಮಹಾದೇವಮ್ಮ, ರಾಜೇಶ್ವರಿ ಹಾಗೂ ಇತರರು ಇದ್ದರು.