ಗುಂಡ್ಲುಪೇಟೆ ಮಹದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ

17-GPT-3
Published on

ಗುಂಡ್ಲುಪೇಟೆ: ಭೀಮನ ಅಮಾವಾಸ್ಯೆ ಹಿನ್ನೆಲೆ ಸೋಮವಾರ ತಾಲೂಕಿನಾದ್ಯಂತ ದೇವಾಲಯಗಳಲ್ಲಿ ಪೂಜಾ ಕೈಂಕರ್ಯಗಳು ಶ್ರದ್ದಾಭಕ್ತಿಗಳಿಂದ ಜರುಗಿದವು.

ಮಹಿಳೆಯರು ತಮ್ಮ ಗಂಡನ ದೀರ್ಘಾಯುಷ್ಯಕ್ಕಾಗಿ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಮಹದೇಶ್ವರ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಪಟ್ಟಣದ ಶ್ರೀ ರಾಮೇಶ್ವರ ದೇವಾಲಯ, ಶ್ರೀ ಕಾಳಿಕಾಂಬಾ ಕಮಠೇಶ್ವರ ದೇವಾಲಯ, ಮಾಡ್ರಹಳ್ಳಿ ಮಹದೇಶ್ವರ, ಇಂಗಲವಾಡಿಯ ಮಹದೇಶ್ವರ ದೇವಾಲಯಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಿತ್ತು. ಅಲಂಕೃತ ವಾಹನಗಳಲ್ಲಿ ಉತ್ಸವ ಮೂರ್ತಿಯನ್ನು ಕುಳ್ಳಿರಿಸಿ ಮಂಗಳ ವಾದ್ಯ ಹಾಗೂ ಜನಪದ ಕಲಾತಂಡಗಳೊಂದಿಗೆ ಮೆರವಣಿಗೆ ಮಾಡಲಾಯಿತು.

ಕೋಡಹಳ್ಳಿ ಮಹದೇಶ್ವರ ದೇವಸ್ಥಾನದಲ್ಲಿ ಶ್ರದ್ದಾ ಭಕ್ತಿಗಳಿಂದ ಕೊಂಡ ಹಾಯಲಾಯಿತು. ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಜಾತ್ರೆಗೆ ಆಗಮಿಸಿ ಪೂಜೆ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net