ಗುಂಡ್ಲುಪೇಟೆ: ಆಷಾಢ ಮಾಸದ ಎರಡನೇ ಶುಕ್ರವಾರ ಅಂಗವಾಗಿ ಗುಂಡ್ಲುಪೇಟೆ ಪಟ್ಟಣದ ಚಾಮುಂಡೇಶ್ವರಿ ದೇವಾಲಯದಲ್ಲಿ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿತು. ಭಾವಸಾರ ಕ್ಷತ್ರಿಯ ಸಮಾಜದ ಮುಖಂಡರು, ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಆಗಮಿಸಿ ಅಮ್ಮನವರ ದರ್ಶನ ಪಡೆದರು.