ಟವರ್ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ಮನವಿ

Published on

ಗುಂಡ್ಲುಪೇಟೆ: ಪಟ್ಟಣದ 1ನೇ ವಾರ್ಡ್‌ನಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡುತ್ತಿರುವ ಟವರ್‌ನಿಂದ ಸಾರ್ವಜನಿಕರು, ಮಕ್ಕಳು, ಗರ್ಭಿಣಿಯರಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಕಾಮಗಾರಿ ನಿಲ್ಲಿಸಬೇಕು ಎಂದು ಬಡಾವಣೆಯ ನಿವಾಸಿಗಳು ಹಾಗೂ ಕರ್ನಾಟಕ ಕಾವಲು ಪಡೆ ಕಾರ್ಯಕರ್ತರು ಸೋಮವಾರ ಪುರಸಭೆಗೆ ಮನವಿ ಸಲ್ಲಿಸಿದರು.

ಕರ್ನಾಟಕ ಕಾವಲು ಪಡೆ ಸಂಘಟನೆ ತಾಲೂಕು ಅಧ್ಯಕ್ಷ ಅಬ್ದುಲ್ ಮಾಲೀಕ್ ನೇತೃತ್ವದಲ್ಲಿ ಪುರಸಭೆ ಮುಖ್ಯಾಧಿಕಾರಿ ವಸಂತಕುಮಾರಿ ಅವರನ್ನು ಸದಸ್ಯರು, ಸ್ಥಳೀಳೀಯ ನಿವಾಸಿಗಳು ಭೇಟಿ ಮಾಡಿ ಮನವಿ ನೀಡಿದರು. 1ನೇ ವಾರ್ಡ್‌ನ ಮಹದೇವಪ್ರಸಾದ್ ಬಡಾವಣೆಯಲ್ಲಿ ಅನಧಿಕೃತವಾಗಿ ಟವರ್ ನಿರ್ಮಾಣ ಮಾಡಲಾಗುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಆದ್ದರಿಂದ ಟವರ್ ನಿರ್ಮಾಣ ಕಾಮಗಾರಿ ನಿಲ್ಲಿಸಬೇಕು ಎಂದು ಒತ್ತಾಯಿಸಿದರು. ಸಂಘಟನೆಯ ಶಕೀಲ್, ರಾಜು, ರಾಮೇಗೌಡ, ಪವನ್, ಎಸ್.ಮುಬಾರಕ್, ಮಾನವ ಬಂಧುತ್ವ ವೇದಿಕೆಯ ಸುಭಾಷ್ ಮಾಡ್ರಹಳ್ಳಿ, ಬಡಾವಣೆ ನಿವಾಸಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net