ಹೆಲ್ಮೆಟ್ ಜಾಗೃತಿ ಮೂಡಿಸಿದ ಎಸ್‌ಪಿ

Published on

ಗುಂಡ್ಲುಪೇಟೆ: ಭಾನುವಾರ ರಾತ್ರಿ ಬೈಕ್ ಸವಾರ ಅಪಘಾತದಲ್ಲಿ ಸಾವಿಗೀಡಾದ ಪಟ್ಟಣದ ಹೊರವಲಯಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಸೋಮವಾರ ಭೇಟಿ ನೀಡಿ ಸಾರ್ವಜನಿಕರಿಗೆ ಹೆಲ್ಮೆಟ್ ಮಹತ್ವದ ಬಗ್ಗೆ ಅರಿವು ಮೂಡಿಸಿದರು.

ಪಟ್ಟಣಕ್ಕೆ ಆಗಮಿಸಿದ ಎಸ್‌ಪಿ ಬಿ.ಟಿ.ಕವಿತಾ, ಅಪಘಾತ ನಡೆದ ಸ್ಥಳ ಪರಿಶೀಲಿಸಿದರು. ಇದೇ ಮಾರ್ಗದಲ್ಲಿ ಹೆಲ್ಮೆಟ್ ಧರಿಸದೆ ಪ್ರಯಾಣಿಸುತ್ತಿದ್ದ ಸಾರ್ವಜನಿಕರನ್ನು ನಿಲ್ಲಿಸಿ ಅಪಘಾತ ನಡೆದ ಸಂದರ್ಭದಲ್ಲಿ ಉಂಟಾಗುವ ಪರಿಣಾಮಗಳ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಅರಿವು ಮೂಡಿಸಿದರು. ಸರ್ಕಲ್ ಇನ್‌ಸ್ಪೆಕ್ಟರ್ ಪರಶಿವಮೂರ್ತಿ, ಸಬ್ ಇನ್‌ಸ್ಪೆಕ್ಟರ್‌ಗಳಾದ ಸಾಹೇಬಗೌಡ ಆರ್, ಚಂದ್ರಪ್ಪ, ಸಿಬ್ಬಂದಿ ಬಿ.ಎಂ.ಪ್ರಭುಸ್ವಾಮಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net