ಬಂಡೀಪುರ ಕಾಡಂಚಿನ ಗ್ರಾಮದಲ್ಲಿ ವನ್ಯಜೀವಿಗಳ ಉಪಟಳ

18-GPT-2
Published on

ಗುಂಡ್ಲುಪೇಟೆ: ತಾಲೂಕಿನ ಹೊಸಪುರ ಗ್ರಾಮದಲ್ಲಿ ಕಾಡಾನೆಗಳು ದಾಳಿ ನಡೆಸಿ ರೈತರ ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳನ್ನು ನಾಶಪಡಿಸುತ್ತಿರುವ ಬಗ್ಗೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಂಡೀಪುರ ಹುಲಿ ಯೋಜನೆಯ ಓಂಕಾರ್ ವಲಯದ ಕಾಡಂಚಿನ ಗ್ರಾಮಗಳಲ್ಲಿ ಇತ್ತೀಚೆಗೆ ಆನೆಗಳ ದಾಳಿ ಪ್ರಕರಣಗಳು ಹೆಚ್ಚಾಗುತ್ತಿವೆ. ಕಳೆದ ಒಂದು ವಾರದಿಂದ ಗ್ರಾಮದ ಶಿವರುದ್ರಪ್ಪ, ಮಹದೇವೇಗೌಡ, ಗೌರಮ್ಮ, ಕಾಳೇಗೌಡ, ಮಹಾಲಿಂಗಪ್ಪ ಎಂಬುವರ ಜಮೀನುಗಳಲ್ಲಿ ಬೆಳೆದಿದ್ದ ಭತ್ತ, ಬಾಳೆ, ಹತ್ತಿ ಹಾಗೂ ಜೋಳದ ಬೆಳೆಗಳನ್ನು ತಿಂದು ತುಳಿದು ನಾಶಪಡಿಸಿವೆ.

ಕಾಡಂಚಿನಲ್ಲಿ ಅಳವಡಿಸಿರುವ ಸೋಲಾರ್ ಬೇಲಿ ದುರ್ಬಲವಾಗಿದ್ದು, ಕಂದಕಗಳು ಮುಚ್ಚಿಕೊಂಡಿವೆ. ಅಲ್ಲದೆ, ಕೆಲವು ಗ್ರಾಮಗಳ ಜಾನುವಾರುಗಳು ಮೇವಿಗಾಗಿ ಅರಣ್ಯದೊಳಗೆ ಪ್ರವೇಶಿಸುವ ಸ್ಥಳಗಳಿಂದ ಪ್ರತಿ ದಿನವೂ ವನ್ಯಜೀವಿಗಳು ಹೊರಬಂದು ಬೆಳೆಗಳನ್ನು ನಾಶಪಡಿಸುತ್ತಿವೆ. ಈ ಬಗ್ಗೆ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದರೂ ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಕಳೆದ ಬಾರಿ ಹಿರಿಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಮುಂದಿನ ದಿನಗಳಲ್ಲಿ ಇಲಾಖೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ ರೂಪಿಸುವುದಾಗಿ ಗ್ರಾಮ ಪಂಚಾಯಿತಿ ಸದಸ್ಯ ಮಹದೇವೆಗೌಡ ಎಚ್ಚರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net