ಸ್ಪೋಟಕ ಸಾಗಿಸುತ್ತಿದ್ದ ಇಬ್ಬರ ಬಂಧನ

Crime Logo
Published on

ಗುಂಡ್ಲುಪೇ:ೆ ತಾಲೂಕಿನ ತೆರಕಣಾಂಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸ್ಪೋಟಕ ಸಾಗಣೆ ಮಾಡುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ತಾಲೂಕಿನ ಬೊಮ್ಮನಹಳ್ಳಿ-ಕುರುಬರಹುಂಡಿ ಸಮೀಪ ಕಂಪ್ರೆಸರ್ ವಾಹನದಲ್ಲಿ 49 ಜೆಲ್ಸ್ ಸ್ಟಿಕ್, 9 ಎಲೆಕ್ಟ್ರಾನಿಕ್ ಡಿಟೋನೇಟರ್ ಮತ್ತು 5 ಮೀಟರ್ ಉದ್ದದ ಬತ್ತಿಗಳನ್ನು ಸಾಗಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಚಾಮರಾಜನಗರ ತಾಲೂಕಿನ ಬಿಜಿ ಕಾಲನಿಯ ಸಿದ್ದರಾಮು(43) ಹಾಗೂ ರಾಜು(50) ಎಂಬುವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net