ಗುಂಡ್ಲುಪೇಟೆ : ತಾಲೂಕಿನ ಬೇಗೂರು ಗ್ರಾಮದ ಪದವಿಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿ ವಿ.ಮಾದೇಶ ಇತ್ತೀಚೆಗೆ ಹನೂರಿನಲ್ಲಿ ನಡೆದ ಕ್ರೀಡಾಕೂಟದಲ್ಲಿ 3 ಸಾವಿರ ಮೀ. ಹಾಗೂ 1500 ಮೀ. ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ತಾಲೂಕು ಹಾಗೂ ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿಯನ್ನು ಕಾಲೇಜಿನ ಆಡಳಿತ ಮಂಡಳಿ ಅಭಿನಂದಿಸಿದೆ.