ವಸತಿ ನಿಲಯಕ್ಕೆ ಮಾಜಿ ಶಾಸಕ ಭೇಟಿ

IMG-20230718-WA0074
Published on

ಗುಂಡ್ಲುಪೇಟೆ: ಮಾಂಸಾಹಾರ ಸೇವಿಸಿ ಅಸ್ವಸ್ಥಗೊಂಡು ವಿದ್ಯಾರ್ಥಿಗಳು ಆಸ್ಪತ್ರೆ ಸೇರಿರುವ ಪ್ರಕರಣ ಹಿನ್ನೆಲೆಯಲ್ಲಿ ತಾಲೂಕಿನ ಯಡವನಹಳ್ಳಿ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಮಾಜಿ ಶಾಸಕ ಸಿ.ಎಸ್. ನಿರಂಜನಕುಮಾರ್ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ಕುರಿತು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯಿಂದ ಮಾಹಿತಿ ಪಡೆದರು.

ವಸತಿ ನಿಲಯದಲ್ಲಿ ಮಕ್ಕಳಿಗೆ ತಂಗಳು, ಹಳಸಿದ ಆಹಾರ ನೀಡಲಾಗುತ್ತಿದೆ ಎಂದು ಪಾಲಕರು ದೂರಿದ ಹಿನ್ನೆಲೆಯಲ್ಲಿ ನಿರಂಜನ್ ಅಸಮಾಧಾನ ವ್ಯಕ್ತಪಡಿಸಿದರು. ನಿಮ್ಮನ್ನು ನಂಬಿ ಪಾಲಕರು ಮಕ್ಕಳನ್ನು ಬಿಟ್ಟು ಹೋಗುತ್ತಾರೆ. ಆದರೆ ನೀವು ಮಾಡುವ ಕೆಲಸದಿಂದ ಎಲ್ಲರ ತಲೆ ತಗ್ಗಿಸುವಂತಾಗಿದೆ. ಏನಾದರು ಹೆಚ್ಚು, ಕಮ್ಮಿಯಾದರೆ ಅದಕ್ಕೆ ನೀವೆ ಹೊಣೆಯಾಗಬೇಕಾಗುತ್ತದೆ ಎಂದು ತರಾಟೆಗೆ ತೆಗೆದುಕೊಂಡರು. ಎಪಿಎಂಸಿ ಅಧ್ಯಕ್ಷ ರವಿ, ಬಿಜೆಪಿ ಮಂಡಲಾಧ್ಯಕ್ಷ ಜಗದೀಶ, ಮುಖಂಡರಾದ ಜಯರಾಜ್, ಕೃಷ್ಣ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net