

ಗುಂಡ್ಲುಪೇಟೆ: ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ತಾಲೂಕಿನ ಅಣ್ಣೂರು ಕೇರಿ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ.
ಗುಂಡ್ಲುಪೇಟೆ ವಲಯದ ಅಬಕಾರಿ ನಿರೀಕ್ಷಕ ತನ್ವೀರ್ ಹಾಗೂ ಸಿಬ್ಬಂದಿ ಖಚಿತ ಮಾಹಿತಿ ಮೇರೆಗೆ ಬುಧವಾರ ಸಂಜೆ ಗ್ರಾಮದ ಜ್ಯೋತಿ ಅವರ ಪೆಟ್ಟಿಗೆ ಅಂಗಡಿಯನ್ನು ಪರಿಶೀಲಿಸಿದಾಗ ಅಕ್ರಮವಾಗಿ ಮಾರಾಟ ಮಾಡಲು ಸುಮಾರು 1,041 ರೂ.ಮೊತ್ತದ 2.340 ಲೀಟರ್ ಮದ್ಯ ಸಂಗ್ರಹವಾಗಿರುವುದು ಕಂಡುಬಂದಿದೆ. ಕಾರ್ಯಾಚರಣೆಯಲ್ಲಿ ಸಿಬ್ಬಂದಿ ಕುಮಾರಸ್ವಾಮಿ, ಸಿದ್ದೇಶ, ಷಣ್ಮುಗ, ಸಿದ್ದರಾಜು ಹಾಜರಿದ್ದರು. ಈ ಸಂಬಂಧ ಪ್ರಕರಣ ದಾಖಲಾಗಿದೆ.