ಮುರಾರ್ಜಿ ವಸತಿ ಶಾಲೆಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ

5
Published on

ಗುಂಡ್ಲುಪೇಟೆ: ತಾಲೂಕಿನ ಯಡವನಹಳ್ಳಿ ಮುರಾರ್ಜಿ ವಸತಿ ಶಾಲೆಗೆ ಸೋಮವಾರ ಸಂಜೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಹಾಸ್ಟೆಲ್‌ನ ಅಡುಗೆ ಮನೆ, ಕೊಠಡಿಗಳು ಹಾಗೂ ಶೌಚಗೃಹ ಅವ್ಯವಸ್ಥೆ ಕಂಡು ಆಡಳಿತ ವರ್ಗ ಹಾಗೂ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.

ಕೋಳಿ ಮಾಂಸ ಸೇವಿಸಿದ ವಸತಿ ಶಾಲೆಯ ಹಲವು ವಿದ್ಯಾರ್ಥಿಗಳಿಗೆ ಹೊಟ್ಟೆನೋವು ಹಾಗೂ ವಾಂತಿ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾದ ಹಿನ್ನೆಲೆಯಲ್ಲಿ ಚಾಮರಾಜನಗರ ಲೋಕಾಯುಕ್ತ ಡಿವೈಎಸ್‌ಪಿ ಮ್ಯಾಥ್ಯೂ ಥಾಮಸ್ ಅವರ ಸೂಚನೆ ಮೇರೆಗೆ ಇನ್ಸ್‌ಪೆಕ್ಟರ್ ಶಶಿಕುಮಾರ್, ರವಿಕುಮಾರ್ ಸ್ಥಳ ಪರಿಶೀಲನೆ ಮಾಡಿದರು.

ಮೊದಲು ಬೇಗೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ವೈದ್ಯ ಶಿವಸ್ವಾಮಿ ಅವರಿಂದ ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ನಂತರ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net