

ಗುಂಡ್ಲುಪೇಟೆ: ಪಟ್ಟಣದ ಆರ್‌ಟಿಒ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದರು.
ಗಡಿಯ ತಾಲೂಕಿನಲ್ಲಿರುವ ಆರ್‌ಟಿಒ ಚೆಕ್‌ಪೋಸ್ಟ್‌ನಲ್ಲಿ ದೊಡ್ಡ ಪ್ರಮಾಣದಲ್ಲಿ ಅವ್ಯವಹಾರ ನಡೆಯುತ್ತಿದೆ ಎಂಬ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆದಿದೆ. ಮಂಗಳವಾರ ಬೆಳಗಿನ ಜಾವ ಮೂರು ಗಂಟೆ ವೇಳೆಗೆ ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ನೇತೃತ್ವದಲ್ಲಿ ದಾಳಿ ನಡೆದಿದೆ. ಈ ವೇಳೆ ಅಧಿಕಾರಿಗಳು ದಾಖಲೆಗಳು, ಹಣ ವಶಕ್ಕೆ ಪಡೆದು ಬೆಳಗ್ಗೆ 9 ಗಂಟೆಯವರೆಗೂ ತಪಾಸಣೆ ನಡೆಸಿದರು.