ಸಿಎಂ ಅನುದಾನದಲ್ಲಿ ಆಯ್ದ ಗ್ರಾಮಗಳ ರಸ್ತೆ ಅಭಿವೃದ್ಧಿ

07-GPT-1
Published on

ಗುಂಡ್ಲುಪೇಟೆ: ಮುಖ್ಯಮಂತ್ರಿಗಳ 25 ಕೋಟಿ ರೂ. ವಿಶೇಷ ಅನುದಾನದಲ್ಲಿ ತಾಲೂಕಿನ ಆಯ್ದ ಗ್ರಾಮಗಳ ರಸ್ತೆಗಳನ್ನು ಅಭಿವೃದ್ಧಿಗೊಳಿಸಲಾಗುವುದು ಎಂದು ಶಾಸಕ ಎಚ್.ಎಂ.ಗಣೇಶ್‌ಪ್ರಸಾದ್ ತಿಳಿಸಿದರು.

ಸೋಮವಾರ ತಾಲೂಕಿನ ತೆರಕಣಾಂಬಿಹುಂಡಿ ಗ್ರಾಮದಲ್ಲಿ 60 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಈಗಾಗಲೇ ತಾಲೂಕಿನ ಆಯ್ದ 62 ಹಳ್ಳಿಗಳಲ್ಲಿ ರಸ್ತೆ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದ್ದು ಸದ್ಯ 12 ಗ್ರಾಮಗಳಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಉಳಿದ ಗ್ರಾಮಗಳಲ್ಲಿ ಹಂತಹಂತವಾಗಿ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟೇಶ, ಸದಸ್ಯ ಚಂದ್ರಶೇಖರ, ಮಾಜಿ ಸದಸ್ಯ ಜಲೇಂದ್ರ, ಎಪಿಎಂಸಿ ನಿರ್ದೇಶಕ ಹಾಗೂ ಬಗರ್ ಹುಕುಂ ಸಮಿತಿಯ ಉಪಾಧ್ಯಕ್ಷ ಪಿ.ಮಹದೇವಪ್ಪ, ಮುಖಂಡರಾದ ನಂಜಪ್ಪ, ಮನು, ಬಿ.ಕೆ.ಶಿವಪ್ಪ, ಮಲ್ಲಿಕಾರ್ಜುನಪ್ಪ , ಆನಂದನಾಯ್ಕ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net