ನೇಣುಬಿಗಿದುಕೊಂಡು ಅಡುಗೆ ಮೇಲ್ವಿಚಾರಕ ಆತ್ಮಹತ್ಯೆ

IMG-20241013-WA0098
Published on

ಗುಂಡ್ಲುಪೇಟೆ: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಹಿಂದುಳಿದ ವರ್ಗಗಳ ಇಲಾಖೆಯ ಹಾಸ್ಟೆಲ್ನ ಸಿಬ್ಬಂದಿಯೊಬ್ಬರು ಭಾನುವಾರ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಾಮರಾಜನಗರ ತಾಲೂಕು ಸಾಗಡೆ ಗ್ರಾಮದ ಮಹದೇವಯ್ಯ ಅವರ ಮಗ ಪ್ರಮೋದ್ ಕುಮಾರ್ (28) ಆತ್ಮಹತ್ಯೆ ಮಾಡಿಕೊಂಡವರು. ಪ್ರಮೋದ್ ಬೇಗೂರು ಗ್ರಾಮದ ಹಾಸ್ಟೆಲ್ನಲ್ಲಿ ಅಡುಗೆ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಹಲವು ದಿನಗಳಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು. ಇದರಿಂದ ಮನನೊಂದು ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಂದೆ ಬೇಗೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸೋಮವಾರ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net