ಕ್ರೀಡೆ, ಸಾಂಸ್ಕೃತಿಕ ವೇದಿಕೆ ಉದ್ಘಾಟನೆ

12-GPT-2
Published on

ಗುಂಡ್ಲುಪೇಟೆ: ಪಟ್ಟಣದ ಜೆಎಸ್‌ಎಸ್ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ 2023-24ನೇ ಸಾಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆಗಳ ಉದ್ಘಾಟನೆಯನ್ನು ಜೆಎಸ್‌ಎಸ್ ಮಹಾವಿದ್ಯಾಪೀಠದ ಶಾಲಾ ಶಿಕ್ಷಣ ವಿಭಾಗದ ನಿರ್ದೇಶಕ ಬಿ.ಎ.ರಾಜಶೇಖರ್ ನೆರವೇರಿಸಿದರು.

ಈ ಸಂದರ್ಭದಲ್ಲಿ ವಿದ್ಯಾಪೀಠದ ಪ್ರಕಟಣಾ ವಿಭಾಗದ ನಿರ್ದೇಶಕ ಮೊರಬದ ಮಲ್ಲಿಕಾರ್ಜುನ, ಕಾಲೇಜಿನ ಪ್ರಾಂಶುಪಾಲ ಎಚ್.ಪಿ.ಬಸವರಾಜಪ್ಪ, ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ.ಪಿ.ಮಹದೇವಮ್ಮ, ಜೆಎಸ್‌ಎಸ್ ಪ್ರೌಢಶಾಲೆಯ ಮುಖ್ಯಶಿಕ್ಷಕ ಮಹೇಶ್, ಭೀಮನಬೀಡು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ನಂದೀಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net