

ಗುಂಡ್ಲುಪೇಟೆ:ಬಂಡೀಪುರ ಹುಲಿ ಯೋಜನೆಯ ನಿರ್ದೇಶಕ ಡಾ.ಪಿ.ರಮೇಶ್‌ಕುಮಾರ್ ಅವರ ವರ್ಗಾವಣೆಗೆ ಕೇಂದ್ರ ಆಡಳಿತ ನ್ಯಾಯ ಮಂಡಲಿ ತಡೆ ನೀಡಿದೆ. ನಾಲ್ಕು ದಿನಗಳ ಹಿಂದೆ ರಮೇಶ್‌ಕುಮಾರ್ ಅವರನ್ನು ಸರ್ಕಾರ ವರ್ಗಾವಣೆಗೊಳಿಸಿ ಈ ಸ್ಥಾನಕ್ಕೆ ಎಸ್.ಪ್ರಭಾಕರನ್ ಅವರನ್ನು ನಿಯೋಜಿಸಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ರಮೇಶ್‌ಕುಮಾರ್ ನ್ಯಾಯ ಮಂಡಳಿ ಮೊರೆ ಹೋಗಿದ್ದರು.