

ಗುಂಡ್ಲುಪೇಟೆ: ಕೌಂಟುಂಬಿಕ ಕಲಹದಿಂದ ಬೇಸತ್ತ ಯುವಕನೊಬ್ಬ ತಾಲೂಕಿನ ಕಲ್ಲುಕಟ್ಟೆ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ತಾಲೂಕಿನ ಕೋಡಹಳ್ಳಿ ಗ್ರಾಮದ ಗುಡ್ಡಮಾದಶೆಟ್ಟಿ ಎಂಬುವರ ಮಗ ಸ್ವಾಮಿ(23) ಆತ್ಮಹತ್ಯೆ ಮಾಡಿಕೊಂಡ ಯುವಕ. ಶನಿವಾರ ರಾತ್ರಿ ಮನೆಯಲ್ಲಿ ಜಗಳವಾಡಿಕೊಂಡು ಹೊರಗೆ ಹೊರಟ ಸ್ವಾಮಿ, ಸ್ನೇಹಿತರೊಂದಿಗೆ ಮದ್ಯಪಾನ ಮಾಡಿ ನಂತರ ಜಲಾಶಯದತ್ತ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಭಾನುವಾರ ಬೆಳಗ್ಗೆ ಅಗ್ನಿಶಾಮಕ ದಳದ ಸಿಬ್ಬಂದಿ ನೆರವಿನಿಂದ ಮೃತದೇಹ ಹೊರತೆಗೆಯಲಾಯಿತು. ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಪಾಲಕರ ವಶಕ್ಕೆ ನೀಡಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.