

ಗುಂಡ್ಲುಪೇಟೆ: ತಾಲೂಕಿನ ಹಂಗಳ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 1.73 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ 11 ಕೊಠಡಿಗಳನ್ನು ಸೋಮವಾರ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಉದ್ಘಾಟಿಸಿದರು.
ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಸುಸಜ್ಜಿತ ಗ್ರಂಥಾಲಯವಿದ್ದು, ಕಲಿಕೆಗೆ ಅಗತ್ಯವಾದ ಎಲ್ಲ ಪುಸ್ತಕಗಳು ಲಭ್ಯ ಇವೆ. ಆದ್ದರಿಂದ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಿ ಗುಣಮಟ್ಟದ ಶಿಕ್ಷಣ ಕೊಡಿಸಬೇಕು ಎಂದರು.
ಗ್ರಾಪಂ ಅಧ್ಯಕ್ಷೆ ರೂಪಾ, ಮಾಜಿ ಅಧ್ಯಕ್ಷ ಸ್ವಾಮಿ, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್.ಎಂ.ಮಹೇಶ್, ಹಾಪ್‌ಕಾಮ್ಸ್ ಮಾಜಿ ಅಧ್ಯಕ್ಷ ಡಿ.ಬಿ.ಕುಮಾರ್, ಪ್ರಾಂಶುಪಾಲ ಬಿ.ಜಿ.ಗೋಪಾಲಕೃಷ್ಣ ಹಲವರು ಇದ್ದರು.