ಗುರುವಂದನೆ, ಸ್ನೇಹ ಸಮ್ಮಿಲನ ಕಾರ್ಯಕ್ರಮ

10-GPT-4B
Published on

ಗುಂಡ್ಲುಪೇಟೆ: ತಾಲೂಕಿನ ಚಿಕ್ಕಾಟಿ ಗ್ರಾಮದಲ್ಲಿ ಹಳೆಯ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಸೇರಿ ಭಾನುವಾರ ಆಯೋಜಿಸಿದ್ದ ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಿತು.

ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮದ ಅಂಗವಾಗಿ ಗ್ರಾಮದ ಹೆಣ್ಣುಮಕ್ಕಳಿಂದ ಪೂರ್ಣಕುಂಭ, ವೀರಮಕ್ಕಳ ಕುಣಿತ, ಜನಪದ ಹಾಗೂ ಸ್ಥಳೀಯ ಕಲಾತಂಡಗಳ ಜತೆ ಗ್ರಾಮದ ಸರ್ಕಾರಿ ಶಾಲೆಗಳಲ್ಲಿ ಸೇವೆ ಸಲ್ಲಿಸಿದ್ದ ಸುಮಾರು 75ಕ್ಕೂ ಹೆಚ್ಚಿನ ಶಿಕ್ಷಕರನ್ನು ತೆರೆದ ವಾಹನದ ಮೇಲೆ ಪ್ರಮುಖ ಬೀದಿಗಳಲ್ಲಿ ಅದ್ದೂರಿಯಾಗಿ ಮೆರವಣಿಗೆ ಮೂಲಕ ವೇದಿಕೆಗೆ ಕರೆತರಲಾಯಿತು.

ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಎಂ.ಮುನಿರಾಜು ಉದ್ಘಾಟಿಸಿದರು. ಹಿರಿಯ ಶಿಕ್ಷಕರಾದ ಲಕ್ಷ್ಮೀಪತಿ ಮತ್ತು ಕಾಶೀನಾಥ್ ಮಾತನಾಡಿದರು. ಹಿರಿಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡರು. ನಂತರ ಎಲ್ಲ ಶಿಕ್ಷಕರಿಗೂ ಮೈಸೂರು ಪೇಟ ಹಾಗೂ ಶಾಲು ಹೊದಿಸಿ ಗೌರವ ಸಮರ್ಪಿಸುವ ಮೂಲಕ ಹಳೆ ವಿದ್ಯಾರ್ಥಿಗಳು ಧನ್ಯತೆ ಮೆರೆದರು.

ಕಾರ್ಯಕ್ರಮದಲ್ಲಿ ಗ್ರಾಮಪಂಚಾಯಿತಿ ಪದಾಧಿಕಾರಿ, ಜನಪ್ರತಿನಿಧಿಗಳು, ಎಲ್ಲ ಜನಾಂಗದ ಮುಖಂಡರು. ಶಾಲೆಯಲ್ಲಿ ವ್ಯಾಸಂಗ ಮಾಡಿದ ಅಕ್ಕಪಕ್ಕದ ಗ್ರಾಮಗಳ ವಿದ್ಯಾರ್ಥಿಗಳು, ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net