ಮಹಿಳಾ ದೌರ್ಜನ್ಯ ತಡೆಗೆ ಕಾನೂನು ಅರಿವು ಅಗತ್ಯ

11-GPT-4
Published on

ಗುಂಡ್ಲುಪೇಟೆ: ಮಹಿಳಾ ದೌರ್ಜನ್ಯ ಹಾಗೂ ಬಾಲ್ಯವಿವಾಹದಿಂದ ಹೆಣ್ಣು ಮಕ್ಕಳ ಜೀವನ ಹಾಳಾಗುವುದನ್ನು ತಪ್ಪಿಸಲು ಸರ್ಕಾರ ಬಿಗಿಯಾದ ಕಾನೂನುಗಳನ್ನು ಜಾರಿಗೆ ತಂದಿದ್ದು, ಇವುಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕಾಗಿದೆ ಎಂದು ಹಿರಿಯ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ ತಳವಾರ್ ಹೇಳಿದರು.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸೋಮವಾರ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತಾಡಿದರು. ಹೆಣ್ಣು ಮಕ್ಕಳು ಮನಸ್ಸು ಮಾಡಿದರೆ ಏನನ್ನಾದರೂ ಸಾಧಿಸಬಲ್ಲರು. ಆದ್ದರಿಂದ ಪಾಲಕರು ತಮ್ಮ ಹೆಣ್ಣು ಮಕ್ಕಳನ್ನು ಕೀಳಾಗಿ ಕಾಣಬಾರದು. ತಮ್ಮ ಜವಾಬ್ದಾರಿ ಕಳೆದುಕೊಳ್ಳಲು ಬಾಲ್ಯ ವಿವಾಹ ಮಾಡುವ ಬದಲು ಉನ್ನತ ಶಿಕ್ಷಣ ಕೊಡಿಸುವ ಮೂಲಕ ಸಮಾಜದಲ್ಲಿ ಉತ್ತಮ ಸ್ಥಾನಕ್ಕೇರುವಂತೆ ಮಾಡಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಅಪರ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಕಾಂತಮ್ಮ, ಪ್ರಧಾನ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಜೆ.ಜೆ.ಶಿವಕುಮಾರ್, ವಕೀಲರ ಸಂಘದ ಅಧ್ಯಕ್ಷ ವೆಂಕಟೇಶ್, ಸಹಾಯಕ ಸರ್ಕಾರಿ ಅಭಿಯೋಜಕರಾದ ರೇವಣ್ಣ, ಮೊಹಮ್ಮದ್ ವಾಸಿಂಉಲ್ಲಾ, ಉಷಾರಾಣಿ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net