ಶ್ರೀ ವಿನಾಯಕ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ಪಾಸ್

Published on

ಗುಂಡ್ಲುಪೇಟೆ: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಸಿಬಿಎಸ್‌ಇ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಪಟ್ಟಣದ ಅಶ್ವಿನಿ ಬಡಾವಣೆಯ ಶ್ರೀ ವಿನಾಯಕ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ ಲಭಿಸಿದೆ.

ಶಾಲೆಯ ವಿದ್ಯಾರ್ಥಿನಿ ಶ್ರೇಯಾ(549) ಅಂಕ ಗಳಿಸುವ ಮೂಲಕ ತಾಲೂಕಿಗೆ ಮೊದಲ ಸ್ಥಾನ ಪಡೆದಿದ್ದಾಳೆ. ಅಲ್ಲದೆ ಕನ್ನಡದಲ್ಲಿ ಪೂರ್ಣ ಅಂಕ ಗಳಿಸಿದ್ದಾಳೆ. ಉಳಿದಂತೆ ಮಾನಸಾ (486), ದೀಪಾಂಜಲಿ(482), ಯಶಸ್ವಿನಿ(468), ಪ್ರತೀಕ್ಷಾ(467) ಅಂಕ ಗಳಿಸಿದ್ದಾರೆ. ಒಟ್ಟು 13 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲರೂ ಉತ್ತೀರ್ಣರಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿ, ಶಿಕ್ಷಕರು, ಬೋಧಕೇತರ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net