ಶಾಲೆ ಕೊಠಡಿ ನಿರ್ಮಾಣಕ್ಕೆ ಭೂಮಿಪೂಜೆ

03-GPT-3
Published on

ಗುಂಡ್ಲುಪೇಟೆ: ತಾಲೂಕಿನ ಬೊಮ್ಮಲಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 14 ಲಕ್ಷ ರೂ. ವೆಚ್ಚದಲ್ಲಿ ಹೆಚ್ಚುವರಿ ಕೊಠಡಿ ನಿರ್ಮಾಣ ಕಾಮಗಾರಿಗೆ ಶಾಸಕ ಎಚ್.ಎಂ.ಗಣೇಶ್‌ಪ್ರಸಾದ್ ಬುಧವಾರ ಭೂಮಿಪೂಜೆ ನೆರವೇರಿಸಿದರು. ಬೊಮ್ಮಲಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ, ಮಾಜಿ ಅಧ್ಯಕ್ಷರಾದ ಸದಾನಂದಪ್ಪ, ಶೇಖರಪ್ಪ, ಜಿಪಂ ಮಾಜಿ ಸದಸ್ಯ ಬಿ.ಕೆ.ಬೊಮ್ಮಯ್ಯ, ತಾಪಂ ಮಾಜಿ ಅಧ್ಯಕ್ಷ ಎಚ್.ಎನ್.ಬಸವರಾಜು, ಮುಖ್ಯಶಿಕ್ಷಕ ಶಿವಯ್ಯ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net