ಗುಂಡ್ಲುಪೇಟೆ: ತಾಲೂಕಿನ ಬಸವಾಪುರ ಗ್ರಾಮದಲ್ಲಿ ಶನಿವಾರ ಅಂತ್ಯಕ್ರಿಯೆಗೆ ತೆರಳಿದ್ದವರ ಮೇಲೆ ಜೇನುದಾಳಿ ನಡೆಸಿ ಗಾಯಗೊಳಿಸಿದೆ. ಗ್ರಾಮದ ನಿವಾಸಿ ಮಹದೇವಯ್ಯ ಅವರ ಅಂತ್ಯಕ್ರಿಯೆ ಸಂದರ್ಭದಲ್ಲಿ ಏಕಾಏಕಿ ಜೇನುದಾಳಿ ನಡೆಸಿದ ಪರಿಣಾಮ ಐವತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಗಾಯಗೊಂಡವರಿಗೆ ಸಮೀಪದ ಹಂಗಳ ಪ್ರಾಥಮಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು. ತೀವ್ರವಾಗಿ ಸಮಸ್ಯೆ ಎದುರಿಸುತ್ತಿರುವ 19 ಜನರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ತಾಲೂಕು ಆರೋಗ್ಯಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ ನೀಡಿ ಪರಿಶೀಲಿಸಿದರು.