ಬೆಲೆ ಏರಿಕೆ ವಿರುದ್ಧ ಗುಂಡ್ಲುಪೇಟೆಯಲ್ಲಿ ಪ್ರತಿಭಟನೆ

07-JAN-GPT-2-BJP -- PROTEST
Published on

ಗುಂಡ್ಲುಪೇಟೆ : ಬೆಲೆ ಏರಿಕೆ ವಿರುದ್ಧ ಪಟ್ಟಣದಲ್ಲಿ ಬಿಜೆಪಿ ಹಾಗೂ ಕರ್ನಾಟಕ ಕಾವಲು ಪಡೆ ಸಂಘಟನೆ ನೇತೃತ್ವದಲ್ಲಿ ಮಂಗಳವಾರ ಪ್ರತ್ಯೇಕ ಪ್ರತಿಭಟನೆಗಳು ನಡೆದವು. ಮಂಡಲಾಧ್ಯಕ್ಷ ಸಿ.ಮಹದೇವಪ್ರಸಾದ್ ನೇತೃತ್ವದಲ್ಲಿ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಬಿಜೆಪಿ ಕಾತ್ಯಕರ್ತರು ಸಾರಿಗೆ ಬಸ್ ನಿಲ್ದಾಣದ ಎದುರು ಮಾನವ ಸರಪಳಿ ರಚಿಸಿದರು. ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಈ ಸಂದರ್ಭ ಅಡಚಣೆ ಉಂಟಾಯಿತು. ದಿನೇ ದಿನೇ ಅಗತ್ಯವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕಂದಾಯ ಅಧಿಕಾರಿಗೆ ಮನವಿ: ಕರ್ನಾಟಕ ಕಾವಲು ಪಡೆ ಸಂಘಟನೆ ತಾಲೂಕು ಅಧ್ಯಕ್ಷ ಅಬ್ದುಲ್ ಮಾಲೀಕ್ ನೇತೃತ್ವದಲ್ಲಿ ಪಟ್ಟಣದ ಪ್ರವಾಸಿ ಮಂದಿರದಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಸಾಗಿದ ಕಾರ್ಯಕರ್ತರು , ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿದರು. ಜನ ಸಾಮಾನ್ಯರು ಬದುಕುವುದು ಕಷ್ಟವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಂತರ ತಾಲೂಕು ಕಚೇರಿಗೆ ತೆರಳಿ ಅಗತ್ಯವಸ್ತುಗಳ ಬೆಲೆ ಇಳಿಸುವಂತೆ ಒತ್ತಾಯಿಸಿದ ಮನವಿಪತ್ರವನ್ನು ಕಂದಾಯ ಅಧಿಕಾರಿಗಳಿಗೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net