ಪಾಲಕರು ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ : ಆನೆಗುಂದಿ ಶ್ರೀ ಆಶೀರ್ವಚನ

New Project (18)
Published on

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ

ರಾಜಕಾರಣದಲ್ಲಿ ಸಿಗುವ ಅಧಿಕಾರ ಕ್ಷಣಿಕವಾದುದು. ಉನ್ನತ ಶಿಕ್ಷಣ ಪಡೆಯುವುದರಿಂದ ಸಿಗುವ ಅಧಿಕಾರ ಬದುಕಿನಲ್ಲಿ ಶಾಶ್ವತವಾದುದು. ಹಾಗಾಗಿ ಪಾಲಕರು ಮಕ್ಕಳಿಗೆ ಉನ್ನತ ಶಿಕ್ಷಣ ನೀಡಬೇಕು ಎಂದು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಹೇಳಿದರು.

ಮೂಡುಬಿದಿರೆ ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ವರ್ಷಾವಧಿ ಮಹೋತ್ಸವ ಅಂಗವಾಗಿ ಆಯೋಜಿಸಲಾಗಿದ್ದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.

ಮಹಾಲಸಾ ನಾರಾಯಣ ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರ ರಮೇಶ್ ಭಟ್ ಎಂ. ಮುಖ್ಯ ಅತಿಥಿಯಾಗಿದ್ದರು. ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಲೋಕೇಶ್ ಆಚಾರ್ ಎಂ.ಬಿ. ಕಂಬಾರ್ ಧಾರ್ಮಿಕ ಉಪನ್ಯಾಸ ನೀಡಿದರು.

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕೃಷಿ ವಿಭಾಗದ ಮುಖ್ಯಸ್ಥ ಡಾ.ಕೆ.ವಿ. ಸುರೇಶ್ ಆಚಾರ್ಯ, ಅಯನ್ ಶಿಲ್ಪಿ ವೈ.ದಾಮೋದರ ಆಚಾರ್ಯ ಎರ್ಲಪಾಡಿ, ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತ ಯಮುನಾ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು. ದರೆಗುಡ್ಡೆ ಗ್ರಾಮ ಕೂಡುವಳಿಕೆ ಮೊಕ್ತೇಸರ ರವೀಂದ್ರ ಆಚಾರ್ಯ, ಜ್ಯೋತಿಷ್ಯ ವಿದ್ವಾಂಸ ಡಾ.ವೀರಭದ್ರ ಆಚಾರ್ಯ ಪುರೋಹಿತ್ ಬೆಂಗಳೂರು ಹಾಗೂ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಬಹುಮಾನ ವಿಜೇತ ರಿಷಬ್ ಎಚ್.ಎಂ. ಅವರನ್ನು ಗೌರವಿಸಲಾಯಿತು.

ಕ್ಷೇತ್ರದ ಆಡಳಿತ ಮೊಕ್ತೇಸರ ಎಂ.ಕೆ.ಬಾಲಕೃಷ್ಣ ಆಚಾರ್ಯ ಉಳಿಯ ಅಧ್ಯಕ್ಷತೆ ವಹಿಸಿದ್ದರು. ಕಾಳಿಕಾಂಬಾ ಸೇವಾ ಸಮಿತಿ ಅಧ್ಯಕ್ಷ ಶ್ರೀನಾಥ ಆಚಾರ್ಯ, ಕಾಳಿಕಾಂಬಾ ಮಹಿಳಾ ಸಮಿತಿ ಅಧ್ಯಕ್ಷೆ ಶಾಂತಲಾ ಸೀತಾರಾಮ ಆಚಾರ್ಯ ಉಪಸ್ಥಿತರಿದ್ದರು. ಮೊಕ್ತೇಸರ ಶಿವರಾಮ ಆಚಾರ್ಯ ಉಳಿಯ ಸ್ವಾಗತಿಸಿದರು. ಮೊಕ್ತೇಸರ ಯೋಗೀಶ್ ಆಚಾರ್ಯ ವಂದಿಸಿದರು. ಜಗದೀಶ ಆಚಾರ್ಯ ಬೇಲಾಡಿ, ಪತ್ರಕರ್ತ ಧನಂಜಯ ಮೂಡುಬಿದಿರೆ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net