ಮೂಲ್ಕಿಯಲ್ಲಿ ಗುರು ಪೂರ್ಣಿಮಾ ಮಹೋತ್ಸವ

37
Published on

ಮೂಲ್ಕಿ: ಕೊಲೆಕಾಡಿ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಗುರು ಪೂರ್ಣಿಮಾ ಮಹೋತ್ಸವ ವಾದಿರಾಜ ಉಪಾಧ್ಯಾಯ ಮಾರ್ಗದರ್ಶನದಲ್ಲಿ ನಡೆಯಿತು.

ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಗುರುವಾರ ಬೆಳಗ್ಗೆ ಕ್ಷೇತ್ರದ ಅರ್ಚಕ ಪ್ರದೀಪ್ ಸಾಲ್ಯಾನ್ ಪುರೋಹಿತ್ಯದಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು. ಅತಿಕಾರಿಬೆಟ್ಟು ಗ್ರಾಪಂ ಉಪಾಧ್ಯಕ್ಷ ಮನೋಹರ ಕೋಟ್ಯಾನ್, ಮಂದಿರದ ಅಧ್ಯಕ್ಷ ಈಶ್ವರ್ ಎಲ್.ಶೆಟ್ಟಿ, ಕೋಶಾಧಿಕಾರಿ ರಂಗನಾಥ ಶೆಟ್ಟಿ, ಕಾರ್ಯದರ್ಶಿ ಶ್ರೀಧರ ಕೋಟ್ಯಾನ್, ಜಯಶ್ರೀ ಎಸ್.ಕೋಟ್ಯಾನ್, ಯೋಗಾನಂದ ಮತ್ತಿತರರು ಉಪಸ್ಥಿತರಿದ್ದರು.

ಬಳಿಕ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಬೆಳಗ್ಗೆ 10 ಗಂಟೆಗೆ ಗುರುಪಾದುಕಾಪೂಜೆ, ಮಧ್ಯಾಹ್ನ ಮಹಾಪೂಜೆ, ಮಹಾ ಅನ್ನಸಂತರ್ಪಣೆ, ರಾತ್ರಿ ಧೂಪಾರತಿ, ಮಹಾ ಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು. ಸಾವಿರಾರು ಮಂದಿ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net