ಶ್ರೀ ಸಾಯಿ ಮಂದಿರದಲ್ಲಿ ಗುರುಪೂರ್ಣಿಮೆ ಸಂಭ್ರಮ

10 Dwd 5
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ನಗರದ ಕಮಲಾಪುರ ಶಾಂತಿ ಕಾಲನಿಯ ಶ್ರೀ ಸಾಯಿ ಬಾಬಾ ದೇವಸ್ಥಾನದಲ್ಲಿ ಗುರುಪೂರ್ಣಿಮೆ ಅಂಗವಾಗಿ 2 ದಿನ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಬುಧವಾರ ಬೆಳಗ್ಗೆ ಶ್ರೀ ಸಾಯಿ ಬಾಬಾರ ಪಲ್ಲಕ್ಕಿ ಉತ್ಸವ ಜರುಗಿತು. ಗುರುವಾರ ಬೆಳಗ್ಗೆ 6.30ಕ್ಕೆ ಶ್ರೀ ಸಾಯಿಬಾಬಾಗೆ ರುದ್ರಾಭಿಷೇಕ ನಂತರ ಶ್ರೀ ಸತ್ಯನಾರಾಯಣ ಪೂಜೆ ನೆರವೇರಿಸಲಾಯಿತು. ಮಧ್ಯಾಹ್ನ 12 ಗಂಟೆಯಿ0ದ ಭಕ್ತರಿಗೆ ಅನ್ನಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಸಂಜೆ 6 ಗಂಟೆಗೆ ದೇವರ ಆರಾಧನೆ, ಭಜನೆ, ರಾತ್ರಿ 8 ಗಂಟೆಗೆ ಮಹಾಮಂಗಳಾರತಿ ನೆರವೇರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net