ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಮಹತ್ವ : ಪ್ರಾಂಶುಪಾಲ ಪ್ರಮೋದ್ ಕುಮಾರ್ ಅನಸಿಕೆ

New Project (20)
Published on

ಬೆಳ್ತಂಗಡಿ: ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಕೊಟ್ಟ ಮಹತ್ತದಷ್ಟು ಬೇರೆ ಯಾವ ಸಂಸ್ಕೃತಿಯು ಕೊಡಲಿಲ್ಲ. ವೇದಗಳು, ರಾಮಾಯಣ, ಮಹಾಭಾರತ ಇತ್ಯಾದಿ ಗ್ರಂಥಗಳು ಮೂಡಿಬರಲು ಕಾರಣ ಭಾರತೀಯರು ಗುರುವಿಗೆ ಕೊಟ್ಟ ಸ್ಥಾನದಿಂದ. ಎಲ್ಲರ ಜೀವನದಲ್ಲೂ ಗುರುವಿನ, ಶಿಕ್ಷಕನ ಪಾತ್ರ ಮಹತ್ವದ್ದಾಗಿರುತ್ತದೆ ಎಂದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್. ಬಿ. ಹೇಳಿದರು.

ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಆಯೋಜಿಸಿದ ಗುರುಪೂರ್ಣಿಮಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗುರುಪೂರ್ಣಿಮಾ ವಿಷಯವಾಗಿ ರಚಿಸಿದ ಭಿತ್ತಿಪತ್ರಿಕೆಯನ್ನು ಅನಾವರಣಗೊಳಿಸಲಾಯಿತು. ಸಂಸ್ಕೃತ ಸಂಘ ಅಧ್ಯಕ್ಷೆ ಹಂಸಿನಿ ಭಿಡೆ ಹಾಗೂ ಅಂತರಾಧ್ಯಯನ ವತ್ತಮ್‌ನ ಪ್ರಧಾನ ಸಂಯೋಜಕಿ ಅಂಜನಾ ನೇತೃತ್ವದಲ್ಲಿ ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ಎಲ್ಲ್ಲ ಉಪನ್ಯಾಸಕರಿಗೆ ಶುಭಾಶಯ ಪತ್ರ ನೀಡಿದರು. ಸಂಸ್ಕೃತ ಭಾಷಾ ವಿಭಾಗ ಮುಖ್ಯಸ್ಥ ಡಾ.ಪ್ರಸನ್ನ ಕುಮಾರ ಐತಾಳ್ ಸ್ವಾಗತಿಸಿದರು. ಹಂಸಿನಿ ಭಿಡೆ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net