

ಬೆಂಗಳೂರು: ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಅಕ್ರಮ ಪ್ರಕರಣದಲ್ಲಿ ತಲೆಮರೆಸಿ ಕೊಂಡಿರುವ ಮೂವರು ಆರೋಪಿಗಳ ಸುಳಿವು ಕೊಟ್ಟವರಿಗೆ ಸಿಐಡಿ ಪೊಲೀಸರು ಬಹುಮಾನ ಘೋಷಣೆ ಮಾಡಿದ್ದಾರೆ.
ಆರೋಪಿಯಾಗಿರುವ ಶ್ರೀ ಗುರುರಾಘ ವೇಂದ್ರ ಸಹಕಾರ ಬ್ಯಾಂಕ್ನ ಅಧ್ಯಕ್ಷ ಕೆ. ರಾಮಕೃಷ್ಣ,ಆತನ ಪುತ್ರ ಮತ್ತು ನಿರ್ದೇಶಕ ಕೆ.ಆರ್. ವೇಣುಗೋಪಾಲ್ ಮತ್ತು ಸಾಲಗಾರ ಜಿ.ರಘುನಾಥ್ ತಲೆಮರೆಸಿಕೊಂಡವರು. ಅವರ ಕುರಿತು ಸುಳಿವು ಅಥವಾ ಹಿಡಿದು ಕೊಟ್ಟವರಿಗೆ ಬಹುಮಾನ ಕೊಡುವುದಾಗಿ ಸಿಐಡಿ ಎಸ್ಪಿ (ಡಿಟೆಕ್ವಿವ್) ರಾಘವೇಂದ್ರ ಕೆ. ಹೆಗಡೆ ತಿಳಿಸಿದ್ದಾರೆ.
ಬಸವನಗುಡಿಯ ಶ್ರೀ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ನಲ್ಲಿ 1,400 ಕೋಟಿ ರೂ. ಅವ್ಯವಹಾರದ ಆರೋಪ ಕೇಳಿಬಂದಿತ್ತು. ಹೆಚ್ಚಿನ ತನಿಖೆ ಸಲುವಾಗಿ ಸಿಐಡಿಗೆ ವಹಿಸಿ ಸರ್ಕಾರ ಆದೇಶಿಸಿತ್ತು. ಪ್ರಕರಣ ದಾಖಲಾಗುತ್ತಿದಂತೆ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಈ ಕುರಿತು 1ನೇ ಎಸಿಎಂಎಂ ನ್ಯಾಯಾಲಯದಲ್ಲಿ ಘೋಷಿತ ಅಪರಾಧಿಗಳು ಎಂದು ಘೋಷಣೆ ಮಾಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಈ ಆರೋಪಿಗಳ ಸುಳಿವು ಸಿಕ್ಕರೆ ಮಾಹಿತಿ ನೀಡುವಂತೆ ಸಿಐಡಿ ಪೊಲೀಸರು ಮನವಿ ಮಾಡಿದ್ದಾರೆ.
ಇಲ್ಲಿ ಸಂರ್ಪಸಿ
ಸಿಐಡಿ ಆರ್ಥಿಕ ಅಪರಾಧ ಗುಪ್ತದಳ ಡಿವೈಎಸ್ಪಿ ಮೊಬೈಲ್ ಸಂಖ್ಯೆ 94808 00181 ಮತ್ತು ದೂರವಾಣಿ ಸಂಖ್ಯೆ 080-22094485/ 22094498ಗೆ ಕರೆ ಮಾಡಲು ಕೋರಲಾಗಿದೆ.