ಗುರುರಾಯರ 354 ಅರಾಧನಾ ಮಹೋತ್ಸವ

10-08-25--krs1 (1)
Published on

ಕೆ.ಆರ್.ಸಾಗರ: ಕೃಷ್ಣರಾಜಸಾಗರ ರೈಲು ನಿಲ್ದಾಣ ರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನ ಮಠದಲ್ಲಿ 354 ಆರಾಧನಾ ಮಹೋತ್ಸವ ಅಂಗವಾಗಿ ಭಾನುವಾರ ಪೂರ್ವಾರಾಧನೆ ಕಾರ್ಯಕ್ರಮಗಳು ನಡೆದವು. ಮುಖ್ಯ ಅರ್ಚಕರಾದ ಶ್ರೀ ಹಾವೇರಿ ರಾಘವೇಂದ್ರಾಚಾರ್ಯ ನೇತೃತ್ವದಲ್ಲಿ ಶ್ರೀ ರಾಘವೇಂದ್ರಸ್ವಾಮಿಗಳ ಪ್ರತಿಮೆಗೆ ಬೆಳಗ್ಗೆಯಿಂದ ಸುಪ್ರಭಾತ, ವೇದ ಪಾರಾಯಣ ಕಾರ್ಯಕ್ರಮ ನಡೆಯಿತು, ನಂತರ ಪಾದಪೂಜೆ ನಡೆದು ಶ್ರೀ ರಾಘವೇಂದ್ರಸ್ವಾಮಿಗಳಿಗೆ ವಿಶೇಷವಾಗಿ ವಿವಿಧ ಹೂಗಳಿಂದ ಅಲಂಕರಿಸಿ ಪೂಜೆ ಸಲ್ಲಿಸಿ ಮಹಾಮಂಗಳಾರತಿ ಮಾಡಿದ ನಂತರ ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು.

ಈ ಸಂದರ್ಭದಲ್ಲಿ ಅರ್ಚಕರಾದ ಸುರೇಂದ್ರಚಾರ್ಯ ಮತ್ತು ಶ್ರೀ ವಿಜೇಂದ್ರಚಾರ್ಯ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net