ನಿಸನ ಗ್ರಾಮದ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ

GURU vANDANE
Published on

ಎಚ್.ಡಿ. ಕೋಟೆ: ತಾಲೂಕಿನ ನಿಸನ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 1961-62 ರಲ್ಲಿ ಪ್ರಾರಂಭವಾದ ಈ ಶಾಲೆಯಲ್ಲಿ ಇಲ್ಲಿಯವರೆಗೆ ಸೇವೆ ಸಲ್ಲಿಸಿದ ಎಲ್ಲ ಶಿಕ್ಷಕರಿಗೆ ಶಾಲೆಯ ಹಳೆಯ ವಿದ್ಯಾರ್ಥಿ ಬಳಗದಿಂದ ಅದ್ದೂರಿಯಾಗಿ ಸೋಮವಾರ ಸನ್ಮಾನಿಸಲಾಯಿತು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶಾಲಾ ಶಿಕ್ಷಕರನ್ನು ಮತ್ತು ಶಾಲೆಗೆ ಭೂಮಿ ದಾನ ನೀಡಿದವರನ್ನುಬ್ಯಾಂಡ್‌ಸೆಟ್‌ವಾದನದ ಮೂಲಕ ವೇದಿಕೆಗೆ ಕರೆತರಲಾಯಿತು. ಹಿರಿಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ರಮೇಶ್, ವಿದ್ಯಾ ರಾಣಿ. ವಸಂತಾ, ಸರಸ್ವತಿ. ನರಸಿಂಹ ಪ್ರಸಾದ್, ಭಾರತಿ. ಲೇಪಾಕ್ಷಿ, ಸೈಯದ್ ಗೌಸ್,

ಕಲ್ಪನಾ. ಸಿಸಿಲಿಯಾ ಅವರು ಹಿರಿಯ ವಿದ್ಯಾರ್ಥಿಗಳಿಂದ ಸನ್ಮಾನ ಸ್ವೀಕರಿಸಿದರು.ಹಳೆಯ ನೆನಪುಗಳನ್ನು ಸ್ಮರಿಸಿಕೊಂಡ ಶಿಕ್ಷಕರು, ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಹಿರಿಯ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಗುರುಗಳೊಂದಿಗೆ ಭಾವಚಿತ್ರ ತೆಗೆಸಿಕೊಂಡು ಸಂಭ್ರಮಿಸಿದರು. ಶಾಲೆಯ ಶಿಕ್ಷಕರಾದ ರವಿ, ಆರತಿ. ನಯನಾ, ಶಿಕ್ಷಕರ ಸಂಘದ ಗೌರವ ಅಧ್ಯಕ್ಷ ಸುರೇಶ್, ಗ್ರಾಪಂ ಸದಸ್ಯೆ ಅಶ್ವಿನಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net