ಬಿಜೆಪಿ ಮಹಾಶಕ್ತಿ ಕೇಂದ್ರದಿಂದ ಗುರುವಂದನೆ

25
Published on

ಮೂಲ್ಕಿ: ಭಾರತೀಯ ಜನತಾ ಪಾರ್ಟಿ ಮಹಾಶಕ್ತಿ ಕೇಂದ್ರದ ವತಿಯಿಂದ ಗುರುಪೂರ್ಣಿಮೆಯ ಪ್ರಯುಕ್ತ ಗುರುವಂದನಾ ಕಾರ್ಯಕ್ರಮ ನಡೆಯಿತು.

ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಸ್ಥೆಯ ಹಿರಿಯ ಮಾರ್ಗದರ್ಶಕ ವಿಶ್ವನಾಥ ಬಪ್ಪನಾಡು ಅವರನ್ನು ಸ್ವಗೃಹದಲ್ಲಿ ಗೌರವಿಸಲಾಯಿತು.

ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸುನಿಲ್ ಆಳ್ವ, ಮೂಲ್ಕಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶೈಲೇಶ್ ಕುಮಾರ್, ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ನವೀನ್‌ರಾಜ್ ಬಪ್ಪನಾಡು, ನಗರ ಪಂಚಾಯಿತಿ ಮಾಜಿ ಸದಸ್ಯ ವಿಠಲ್ ಎನ್.ಎಂ, ಶಕ್ತಿ ಕೇಂದ್ರದ ಪ್ರಮುಖ್ ಹರಿಶ್ಚಂದ್ರ ಕೋಟ್ಯಾನ್, ಅಶೋಕ್ ಜನನಿ, ಪ್ರಮುಖರಾದ ವೀರಣ್ಣ ಅರಳಗುಂಡಿಗಿ, ಅಜಿತ್ ಮೂಲ್ಕಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net