

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಶಾರದಾ ಸಂಗೀತ ವಿದ್ಯಾಲಯದ ವತಿಯಿಂದ ಪಂ.ಶ0ಕರ ಕಬಾಡಿ ಅವರ ಷಷ್ಟ÷್ಯಬ್ದಿ ಮಹೋತ್ಸವ ಮತ್ತು ಗುರುವಂದನಾ ಕಾರ್ಯಕ್ರಮವನ್ನು ಆ. 10ರಂದು ಬೆಳಗ್ಗೆ 9 ಗಂಟೆಗೆ ಇಲ್ಲಿನ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದೆ. ಹಿರಿಯ ವಯೋಲಿನ್ ವಾದಕ ಪಂ. ಬಿ.ಎಸ್. ಮಠ, ಪಂ. ವಾದಿರಾಜ ನಿಂಬರಗಿ ಹಾಗೂ ಹಿರಿಯ ತಬಲಾ ವಾದಕ ಪಂ. ರಘುನಾಥ ನಾಕೋಡ ಅತಿಥಿಗಳಾಗಿ ಪಾಲ್ಗೊಳ್ಳುವರು. ನಂತರ ಶಂಕರ ಕಬಾಡಿಯವರ ಶಿಷ್ಯವೃಂದ ಸ್ವರ ಝೇಂಕಾರ ವಯೋಲಿನ್ ನಾದನಮನ ಕಾರ್ಯಕ್ರಮ ನಡೆಸಿಕೊಡಲಿದೆ. ಬಳಿಕ ಶಂಕರ ಕಬಾಡಿಯವರ ವಯೋಲಿನ್ ವಾದನಕ್ಕೆ ಡಾ. ರವಿಕಿರಣ ನಾಕೋಡ ತಬಲಾ ಸಾಥ್ ನೀಡುವರು ಎಂದು ಶ್ರೀ ಕುಮಾರೇಶ್ವರ ಕಲ್ಚರಲ್ ಸೊಸೈಟಿ ಅಧ್ಯಕ್ಷ ಮಲ್ಲಿಕಾರ್ಜುನ ಚಿಕ್ಕಮಠ ತಿಳಿಸಿದ್ದಾರೆ.