

ವಿಜಯವಾಣಿ ಸುದ್ದಿಜಾಲ ಕಲಬುರಗಿ
ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶವನ್ನು ಪ್ರಮುಖ ಶೈಕ್ಷಣಿಕ ಕೇಂದ್ರವಾಗಿ ಪರಿವರ್ತಿಸುವಲ್ಲಿ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಅಪ್ರತಿಮ ಕೊಡುಗೆ ನೀಡಿದ ಶರಣಬಸವ ವಿಶ್ವವಿದ್ಯಾಲಯದ ಸಂಸ್ಥಾಪಕ ಕುಲಾಧಿಪತಿಗಳಾದ ಮಹಾದಾಸೋಹಿ ಶರಣಬಸವೇಶ್ವರ ಸಂಸ್ಥಾನದ ೮ನೇ ಪೀಠಾಧಿಪತಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪ ಅವರಿಗೆ ಸಂಸ್ಥಾನದ ದಾಸೋಹ ಮನೆಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಗುರುವಂದನೆ ಸಲ್ಲಿಸಲಾಯಿತು.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯ ಸ್ಥಾಪನೆ ಮಾಡಿದ ಅಪ್ಪಾಜಿ ಅವರಿಗೆ ಮಠಾಧೀಶರು, ಮುಖಂಡರು ಸೇರಿಕೊಂಡು ಪಾದಪೂಜೆ ಮಾಡಿ ಗೌರವ ಸಲ್ಲಿಸಿದರು. ಎಲ್‌ಕೆಜಿಯಿಂದ ಪಿಜಿಯವರೆಗೂ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿರುವ ಡಾ.ಅಪ್ಪ ಅವರ ಕಾರ್ಯವನ್ನು ಕೊಂಡಾಡಿದರು.
ಚಿತ್ತಾಪುರÀ ತಾಲೂಕಿನ ಹರಸೂರು ಕಲ್ಮಠದ ಪೂಜ್ಯ ಕರಿಸಿz್ದೆÃಶ್ವರ ಶಿವಾಚಾರ್ಯರು, ಬೆಳಗುಂಪಿಯ ಅಭಿನವ ಪರ್ವತೇಶ್ವರ ಮಹಾಸ್ವಾಮಿ, ಚವದಾಪುರಿ ಹಿರೇಮಠದ ಪೂಜ್ಯ ಡಾ. ರಾಜಶೇಖರ ಶಿವಾಚಾರ್ಯರು ಆಶೀರ್ವಚನ ನೀಡಿ, ಅಪ್ಪ ಅವರ ಶೈಕ್ಷಣಿಕ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅನನ್ಯವಾಗಿದೆ. ಈ ಭಾಗದ ಮಕ್ಕಳಿಗೆ ಶೈಕ್ಷಣಿಕ ಅವಕಾಶ, ಹೊಸ ಮಾರ್ಗಗಳನ್ನು ತೆರೆದು ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣವನ್ನು ಒದಗಿಸಿದವರು ಡಾ.ಅಪ್ಪ ನಿಜ ಗುರು ಕರೆಯಲು ಸೂಕ್ತ ವ್ಯಕ್ತಿಯಾಗಿದ್ದಾರೆ ಎಂದು ಶ್ಲಾಘಿಸಿದರು.
ಮಹಾದಾಸೋಹ ೯ನೇ ಪೀಠಾಧಿಪತಿ ಪೂಜ್ಯ ಚಿರಂಜೀವಿ ದೊಡ್ಡಪ್ಪ ಅಪ್ಪ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್‌ಪರ್ಸನ್ ಡಾ.ದಾಕ್ಷಾಯಿಣಿ ಅಪ್ಪ ಮಾತನಾಡಿದರು.
ಸಂಸ್ಥೆಯ ಕಾರ್ಯದರ್ಶಿ ಬಸವರಾಜ ದೇಶಮುಖ, ಮಹೇಶ್ವರಿ ಅಪ್ಪ, ಶಿವಾನಿ ಅಪ್ಪ,ಭವಾನಿ ಅಪ್ಪ ಅವರು ಕೂಡಿಕೊಂಡು ಡಾ. ಶರಣಬಸವಪ್ಪ ಅಪ್ಪ, ಪೂಜ್ಯ ಡಾ.ರಾಜಶೇಖರ ಶಿವಾಚಾರ್ಯರು, ಪೂಜ್ಯ ಕರಿಸಿz್ದÉÃಶ್ವರ ಶಿವಾಚಾರ್ಯರು ಮತ್ತು ಪೂಜ್ಯ ಅಭಿನವ ಪರ್ವತೇಶ್ವರ ಮಹಾಸ್ವಾಮಿಗಳಿಗೆ ಗುರುವಂದನೆ ನಿಮಿತ್ತ ಪಾದಪೂಜೆ ಮಾತನಾಡಿದರು.
ಸಂಗೀತ ವಿಭಾಗದ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಗೌರವ ಸಲ್ಲಿಸಿದರು. ವಿದ್ಯಾರ್ಥಿಗಳು ಮತ್ತು ಸಂಗೀತ ವಿಭಾಗದ ಅಧ್ಯಾಪಕರು ವಚನ ಸಂಗೀತ ನಡೆಸಿಕೊಟ್ಟರು. ಪಿಎಚ್. ಡಿ. ಪದವಿ ಪಡೆದವರನ್ನು ಸನ್ಮಾನಿಸಲಾಯಿತು.ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ.ಅನಿಲಕುಮಾರ ಬಿಡವೆ, ಕುಲಸಚಿವ ಡಾ.ಎಸ್.ಜಿ.ಡೊಳ್ಳೇಗೌಡರ್, ಕುಲಸಚಿವ(ಮೌಲ್ಯಮಾಪನ) ಡಾ.ಎಸ್.ಎಚ್.ಹೊನ್ನಳ್ಳಿ, ಡೀನ್ ಡಾ. ಲಕ್ಷಿö್ಮÃ ಪಾಟೀಲ ಮಾಕಾ, ಪ್ರಮುಖರಾದ ಜಗನ್ನಾಥ ಡಿಗ್ಗಿ, ಜಗದೇವಿ ಡಿಗ್ಗಿ, ಡಾ.ಬಸವರಾಜ ಡಿಗ್ಗಿ ಸೇರಿದಂತೆ ವಿವಿಧ ವಿಭಾಗಗಳ ಡೀನರು, ಮುಖ್ಯಸ್ಥರು, ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.