

ಮಂಡ್ಯ: ಗುರುದೇವ ಲಲಿತಕಲಾ ಅಕಾಡೆಮಿಯ ರಜತ ಸಂಭ್ರಮದ ಅಂಗವಾಗಿ ‘ಗುರುದೇವೋತ್ಸವ-2023 ಶಾಸ್ತ್ರೀಯ ನೃತ್ಯೋತ್ಸವವು ಸೆ. 1, 2 ಮತ್ತು 3ರಂದು ನಗರದ ಪಿಇಎಸ್ ಕಾಲೇಜಿನ ವಿವೇಕಾನಂದ ರಂಗಮಂದಿರದಲ್ಲಿ ನಡೆಯಲಿದೆ ಎಂದು ಅಕಾಡೆಮಿ ನಿರ್ದೇಶಕಿ ಡಾ.ಪಿ.ಎಂ.ಚೇತನಾ ರಾಧಾಕೃಷ್ಣ ತಿಳಿಸಿದರು.
1ರಂದು ಸಂಜೆ 4.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಶಾಸಕ ರವಿಕುಮಾರ ಗಣಿಗ ವಹಿಸಲಿದ್ದಾರೆ. ಮೈಸೂರಿನ ಸಿಟಿ ನ್ಯೂರೋ ಸೆಂಟರ್‌ನ ನ್ಯೂರೋ ಸರ್ಜನ್ ಡಾ.ನಂದಿನಿ ಕೇಶವ್, ಸಾಹಿತಿ ತೈಲೂರು ವೆಂಕಟಕೃಷ್ಣ ಭಾಗವಹಿಸಲಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
2ರಂದು ಸಂಜೆ 4ಗಂಟೆಗೆ ಆಯೋಜಿಸಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ವಹಿಸಲಿದ್ದು, ಮನೋವೈದ್ಯ ಡಾ.ಟಿ.ಎಸ್.ಸತ್ಯನಾರಾಯಣರಾವ್, ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ, ನಗರಸಭೆ ಮಾಜಿ ಅಧ್ಯಕ್ಷ ಎಂ.ಜೆ. ಚಿಕ್ಕಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎನ್.ಉದಯ್‌ಕುಮಾರ್, ಕಾವೇರಿ ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲ ಪ್ರದೀಪ್‌ಕುಮಾರ್ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಕೆ.ಟಿ.ಶ್ರೀಕಂಠೇಗೌಡ ಅವರಿಗೆ 2022-23ನೇ ಸಾಲಿನ ಗುರುದೇವ್ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು.
3ರಂದು ಸಂಜೆ 4 ಗಂಟೆಗೆ ಮಾಜಿ ಸಚಿವ ಎಂ.ಎಸ್.ಆತ್ಮಾನಂದ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ ಶುಭ ಹಾರೈಸಲಿದ್ದಾರೆ. ಬೆಂಗಳೂರು ಕರ್ನಾಟಕ ನೃತ್ಯ ಅಕಾಡೆಮಿಯ ಮಾಜಿ ಸದಸ್ಯ ಸುಜೇಂದ್ರ ಬಾಬು, ನಗರಸಭೆ ಸದಸ್ಯೆ ಮಂಜುಳಾ ಉದಯ್ ಶಂಕರ್, ಕದಂಬ ಸೈನ್ಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ 2020-2021ನೇ ಸಾಲಿನ ಸಾಧಕ ವಿದ್ಯಾರ್ಥಿಗಳಿಗೆ ಗೌರವ ಪ್ರಶಸ್ತಿ ನೀಡಲಾಗುವುದು. ಅಂತೆಯೇ ಬಳಿಕ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 150ಕ್ಕೂ ಹೆಚ್ಚು ಹಿರಿಯ, ಕಿರಿಯ ಕಲಾವಿದರು ಭಾಗವಹಿಸಲಿದ್ದಾರೆ. ಏಕವ್ಯಕ್ತಿ ಪ್ರದರ್ಶನ, ಸಮೂಹ ಭರತನಾಟ್ಯ ಪ್ರದರ್ಶನ ಇನ್ನಿತರೆ ಶಾಸ್ತ್ರೀಯ ಬದ್ಧವಾದಂತಹ ಕಾರ್ಯಕ್ರಮವನ್ನು ಪ್ರದರ್ಶಿಸಲಾಗುವುದು ಎಂದು ವಿವರಿಸಿದರು.
ಅಕಾಡೆಮಿ ವ್ಯವಸ್ಥಾಪಕ ನಿರ್ದೇಶಕ ಪಿ.ಎಂ.ರಾಧಾಕೃಷ್ಣ, ಭರತನಾಟ್ಯ ಕಲಾವಿದರಾದ ವಿದ್ಯಾ, ಲಾವಣ್ಯ ಹಾಜರಿದ್ದರು.